ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಛತ್ತೀಸ್ ಗಢ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ರಮಣ್ ಸಿಂಗ್

ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಛತ್ತೀಸ್ ಗಢದಲ್ಲಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದಿದ್ದು, ಸ್ಪೀಕರ್ ನೇಮಕವಾಗಬೇಕಿದೆ.
06:04 PM Dec 17, 2023 IST | Ashitha S

ರಾಯ್ಪುರ: ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಛತ್ತೀಸ್ ಗಢದಲ್ಲಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದಿದ್ದು, ಸ್ಪೀಕರ್ ನೇಮಕವಾಗಬೇಕಿದೆ.

Advertisement

ಡಿ.19 ರಿಂದ ಛತ್ತೀಸ್ ಗಢದ 6 ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿ ಶಾಸಕ ರಾಮ್ ವಿಚರ್ ನೇತಮ್ ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ. ರಾಜ್ ನಂದ್ ಗಾಂವ್ ನಿಂದ ಆಯ್ಕೆಯಾಗಿರುವ 71 ವರ್ಷದ ರಮಣ್ ಸಿಂಗ್ ಸದನದಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದಾರೆ. ಈಗ ಸ್ಪೀಕರ್ ಹುದ್ದೆಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಉಪ ಮುಖ್ಯಮಂತ್ರಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ, ನಿರ್ಗಮಿತ ಛತ್ತೀಸ್ಗಢ ವಿಧಾನಸಭೆಯಲ್ಲಿ ಸ್ಪೀಕರ್ ಆಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಚರಣ್ ದಾಸ್ ಮಹಂತ್ ಮತ್ತು ಮಾಜಿ ಸಿಎಂ ಭೂಪೇಶ್ ಬಘೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ಛತ್ತೀಸ್ಗಢದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಕೆಲಸ ಮಾಡುವುದು ತಮ್ಮ ಹೊಸ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

Advertisement
Tags :
GOVERNMENTindiaLatestNewsNewsKannadaraman-singhನವದೆಹಲಿನಾಮಪತ್ರ
Advertisement
Next Article