ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಾಲ್ಲೂಕು, ಜಿಲ್ಲಾ ಪಂಚಾಯತ್‌ ಚುನಾವಣೆಗೆ ಹೈಕೋರ್ಟ್‌ ಗಡುವು

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ​ಗಡುವು ನಿಗದಿ ಮಾಡಿದೆ.
03:39 PM Nov 09, 2023 IST | Ramya Bolantoor

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ​ಗಡುವು ನಿಗದಿ ಮಾಡಿದೆ. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಂವಿಧಾನದ ನಿಯಮದಂತೆ ಚುನಾವಣೆ ನಡೆಸಬೇಕು ಎಂದು ಹೇಳಿದೆ. ಈಗಾಗಲೇ 10 ವಾರ ಕಾಲಾವಕಾಶ ನೀಡಲಾಗಿದೆ. 4 ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ಅಂತಿಮಗೊಳಿಸಿ ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ.

Advertisement

ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ರೂಪಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶವನ್ನು ಹೊರಡಿಸಿದೆ. ಇನ್ನು ನಾಲ್ಕು ವಾರಗಳಲ್ಲಿ ಎಲ್ಲವೂ ಅಂತಿಮವಾಗಬೇಕು ಎಂದು ಕೋರ್ಟ್‌ ಹೇಳಿದೆ.

Advertisement
Advertisement
Tags :
ELECTIONKARNATAKALatetsNewsNewsKannadaSTATEತಾಲೂಕು ಪಂಚಾಯಿತಿಬೆಂಗಳೂರುಲ್ಲಾ ಪಂಚಾಯಿತಿ
Advertisement
Next Article