ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ  ಅಧಿಕಾರಿಗಳು  ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ.
09:25 AM Apr 23, 2024 IST | Ashika S

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ  ಅಧಿಕಾರಿಗಳು  ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ.

Advertisement

ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ.

Advertisement
Tags :
anaconda snakesKEMPEGOWDA AIRPORTLatetsNewsNewsKarnataka
Advertisement
Next Article