ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಪಾನ್‌ನಲ್ಲಿ ಸಂಭವಿಸಿದ ಭೂಕಂಪಕ್ಕೆ 13 ಮಂದಿ ಬಲಿ

ಹೊಸ ವರ್ಷದ ಮೊದಲ ದಿನದಂದೇ ಜಪಾನ್ ನಲ್ಲಿ 155 ಬಾರಿ ಭೂಕಂಪ ಸಂಭವಿಸಿ, 13 ಮಂದಿ ಸಾವಿಗೀಡಾಗಿದ್ದಾರೆ.
09:36 AM Jan 02, 2024 IST | Gayathri SG

ಟೋಕಿಯೊ: ಹೊಸ ವರ್ಷದ ಮೊದಲ ದಿನದಂದೇ ಜಪಾನ್ ನಲ್ಲಿ 155 ಬಾರಿ ಭೂಕಂಪ ಸಂಭವಿಸಿ, 13 ಮಂದಿ ಸಾವಿಗೀಡಾಗಿದ್ದಾರೆ.

Advertisement

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ.

ಜಪಾನ್‌ನಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ಹೇಳಿದ್ದಾರೆ.

Advertisement

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿಯಲ್ಲಿ ತಿಳಿಸಿದೆ.

Advertisement
Tags :
BreakingNewsJAPANLatestNewsNewsKannadaಟೋಕಿಯೊ
Advertisement
Next Article