For the best experience, open
https://m.newskannada.com
on your mobile browser.
Advertisement

ಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿಗೆ 15 ಮಂದಿ ಮೃತ್ಯು

ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೆಕ್ ಗಣರಾಜ್ಯದ ಪ್ರೇಗ್‌ನ ಚಾರ್ಲ್ಸ್​​ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
01:31 PM Dec 22, 2023 IST | Ramya Bolantoor
ಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿಗೆ  15 ಮಂದಿ ಮೃತ್ಯು

ಪ್ರೇಗ್‌: ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 15 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೆಕ್ ಗಣರಾಜ್ಯದ ಪ್ರೇಗ್‌ನ ಚಾರ್ಲ್ಸ್​​ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

Advertisement

ಈ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದ ಡೇವಿಡ್ ಕೊಜಾಕ್ ತನ್ನ ಸಹಪಾಠಿಗಳನ್ನೇ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಘಟನೆಗೂ ಮೊದಲೇ ಸ್ವಂತ ತಂದೆಯನ್ನು ಮನೆಯಲ್ಲಿಯೇ ಹತ್ಯೆ ಮಾಡಿ ಬಳಿಕ ವಿಶ್ವವಿದ್ಯಾಲಯದಲ್ಲಿ15 ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಡೇವಿಡ್ ಕೋಜಾಕ್ ತನ್ನ ಸಹ ವಿದ್ಯಾರ್ಥಿಗಳ ಮೇಲೆ ಏಕೆ ಗುಂಡು ಹಾರಿಸಲು ಯತ್ನಿಸಿದನು ಎಂದು ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Advertisement
Tags :
Advertisement