For the best experience, open
https://m.newskannada.com
on your mobile browser.
Advertisement

ಹಿಮಾಚಲದಲ್ಲಿ ಭಾರೀ ಮಳೆಗೆ ಪ್ರವಾಹ : 150 ರಸ್ತೆ ಬಂದ್‌!

 ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ.
11:33 AM Jul 07, 2024 IST | Nisarga K
ಹಿಮಾಚಲದಲ್ಲಿ ಭಾರೀ ಮಳೆಗೆ ಪ್ರವಾಹ   150 ರಸ್ತೆ ಬಂದ್‌
ಹಿಮಾಚಲದಲ್ಲಿ ಭಾರೀ ಮಳೆಗೆ ಪ್ರವಾಹ : 150 ರಸ್ತೆ ಬಂದ್‌!

ಗುವಾಹಾಟಿ: ಹಿಮಾಚಲ ಪ್ರದೇಶ, ಅಸ್ಸಾಂನಲ್ಲಿ ಭಾರೀ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮಳೆ, ಪ್ರವಾಹದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ 150 ರಸ್ತೆಗಳನ್ನು ಮುಚ್ಚಲಾಗಿದೆ.

Advertisement

ಧರ್ಮಶಾಲಾ, ಪಾಲಂಪುರದಲ್ಲಿ ಮಳೆ ಪ್ರಮಾಣ 200 ಮಿಲಿಮೀಟರ್‌ಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ಜನಜೀವನಕ್ಕೆ ವ್ಯತ್ಯಯ ಉಂಟಾಗಿದೆ. ಮಂಡಿಯಲ್ಲಿನ 111 ರಸ್ತೆಗಳು, ಶಿಮ್ಲಾದ 9 ರಸ್ತೆಗಳು ಸೇರಿಂದತೆ ವಿವಿಧೆಡೆಯಲ್ಲಿ ರಸ್ತೆಗಳು ಜಲಾವೃತಗೊಂಡ ಕಾರಣ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement
Tags :
Advertisement