ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗಾಜಾ ಪಟ್ಟಿಯಲ್ಲಿ ಪ್ರತಿದಿನ 160 ಮಕ್ಕಳು ಸಾವು

ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಪ್ರತಿದಿನ 160 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.
05:09 PM Nov 08, 2023 IST | Ashika S

ಜಿನೀವಾ: ಇಸ್ರೇಲ್‌ ಹಮಾಸ್‌ ಸಂಘರ್ಷ ಆರಂಭವಾಗಿ ಒಂದು ತಿಂಗಳು ಕಳೆದಿದೆ. ಈ ಅವಧಿಯಲ್ಲಿ ಪ್ರತಿದಿನ 160 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.

Advertisement

ಅದೇ ರೀತಿ 16 ಆರೋಗ್ಯ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ. ಆರೋಗ್ಯ ರಕ್ಷಣೆ ಕಾರ್ಯಕರ್ತರ ವಿರುದ್ಧ ಗಾಜಾದಲ್ಲಿ 102 ದಾಳಿಗಳು ಸಂಭವಿಸಿದೆ. ವೆಸ್ಟ್‌ ಬ್ಯಾಂಕ್‌ ನಲ್ಲಿ 121, ಇಸ್ರೇಲ್‌ ನಲ್ಲಿ 25 ದಾಳಿಗಳು ನಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ಹೇಳಿದೆ. ಅದೇ ರೀತಿ ಇಂಧನ ಕೊರತೆಯಿಂದ ಗಾಜಾದ 14 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಸಂಸ್ಥೆ ಬುಲೆಟಿನ್‌ ಹೇಳಿದೆ.

ಇಸ್ರೇಲ್‌ ನ 200 ಕ್ಕೂ ಅಧಿಕ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ಅಧಿಕಾರಿ ಕ್ರಿಶ್ಚಿಯನ್ ಲಿಂಡ್ಮಿಯರ್ ಇದೇ ವೇಳೆ ಒತ್ತಾಯಿಸಿದ್ದಾರೆ.

Advertisement

Advertisement
Tags :
LatetsNewsNewsKannadaಇಸ್ರೇಲ್‌ಮಕ್ಕಳುವಿಶ್ವ ಆರೋಗ್ಯ ಸಂಸ್ಥೆಹಮಾಸ್
Advertisement
Next Article