ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಳ್ಳತನಕ್ಕೆ ಯತ್ನಿಸಿದ 17 ವರ್ಷದ ಬಾಲಕನ ಮೇಲೆ ಕಾರ್ಮಿಕರಿಂದ ಹಲ್ಲೆ

ಎಂಟು ಮಂದಿ ಕೂಲಿ ಕಾರ್ಮಿಕರು 17 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಬೆಲ್ಟ್‌ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌ಟಿಒ ರಸ್ತೆಯ ಉಪಕಾರ್‌ ಲೇಔಟ್‌ ಬಳಿ ನಡೆದಿದೆ.
10:43 AM Feb 22, 2024 IST | Ashika S

ಬೆಂಗಳೂರು: ಎಂಟು ಮಂದಿ ಕೂಲಿ ಕಾರ್ಮಿಕರು 17 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಬೆಲ್ಟ್‌ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌ಟಿಒ ರಸ್ತೆಯ ಉಪಕಾರ್‌ ಲೇಔಟ್‌ ಬಳಿ ನಡೆದಿದೆ.

Advertisement

ಗಾಯಗೊಂಡಿರುವ ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಗಾಯಗೊಂಡ ಬಾಲಕ ಆರ್.ಜಿ. ನಗರದ ಹೆಗ್ಗನಹಳ್ಳಿ 1ನೇ ಕ್ರಾಸ್ ನಿವಾಸಿ. ಈತ ತನ್ನ ಸ್ನೇಹಿತ ಪ್ರಜ್ವಲ್ ಜೊತೆಗೂಡಿ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ತೆರಳಿದ್ದ. ಈ ವೇಳೆ ಅಲ್ಲೇ ಮಲಗಿದ್ದ ಎಂಟು ಮಂದಿ ಕೂಲಿ ಕಾರ್ಮಿಕರ ಪೈಕಿ ಮೂವರ ಮೇಲೆ ಹಲ್ಲೆ ನಡೆಸಿದ ಪ್ರಜ್ವಲ್, ನಗದು, ಮೊಬೈಲ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದಾನೆ.

Advertisement

ಅಲ್ಲಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾಲು ಜಾರಿ ಕೆಳಗೆ ಬಿದ್ದ ಅಪ್ರಾಪ್ತ ಕಾರ್ಮಿಕರಿಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಮಿಕರು ಬಾಲಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ ಎನ್ನಲಾಗಿದೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅವರು ಬಾಲಕ ಮತ್ತು ಪ್ರಜ್ವಲ್ ವಿರುದ್ಧ ದೂರು ದಾಖಲಿಸಿದ್ದಾರೆ. ಮಚ್ಚನ್ನು ಹಿಡಿದುಕೊಂಡಿದ್ದ ಪ್ರಜ್ವಲ್, ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿ ಅವರಿಂದ 29,000 ರೂ. ನಗದು ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿದ್ದಾನೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಬಾಲಕನನ್ನು ಉಳ್ಳಾಲ ಮುಖ್ಯರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡಿರುವ ಕಾರ್ಮಿಕರಾದ ಲಬ್ಕುಶ್, ರಜಿತ್ ಮತ್ತು ರಿಂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

Advertisement
Tags :
LatestNewsNewsKannadaಕೂಲಿ ಕಾರ್ಮಿಕಜ್ಞಾನಭಾರತಿಪೊಲೀಸ್ ಠಾಣೆಬೆಲ್ಟ್ಹಲ್ಲೆ
Advertisement
Next Article