ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 12ಕ್ಕೆ ಏರಿಕೆ

ಲಕ್ನೋ: ಮಥುರಾದಲ್ಲಿ ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.
04:46 PM Nov 24, 2023 IST | Ashitha S

ಲಕ್ನೋ: ಮಥುರಾದಲ್ಲಿ ದೀಪಾವಳಿ ಹಬ್ಬಕ್ಕಾಗಿ ನಿರ್ಮಿಸಿದ್ದ ಪಟಾಕಿ ಅಂಗಡಿಗಳಿಗೆ ಬೆಂಕಿ ತಗುಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಅಪ್ರಾಪ್ತ ಸೇರಿ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಈ ಮೂಲಕ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪಿಟಾ ನಾಗ್ಲಾ ಗ್ರಾಮದ ದೀಪಚಂದ್ (28) ಹಾಗೂ ನೌಜಿಲ್ ನಿವಾಸಿ ರಿಂಕು (17) ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ.

Advertisement

ಮೊದಲು ದೀಪಕ್‍ಚಂದ್‍ನನ್ನು ಆಗ್ರಾದ ಎಸ್‍ಎನ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಿಲ್ಲದೆ ಅವನನ್ನು ಮನೆಗೆ ಕರೆತಂದಿತ್ತು. ರಿಂಕು ಎಂಬವನನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಸುಟ್ಟಗಾಯಗಳಿಂದ ಬಳಲುತ್ತಿದ್ದ 10 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದರು. ಇನ್ನೂ ಇಬ್ಬರು ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement
Tags :
indiaLatestNewsNewsKannadaಅಗ್ನಿ ಅವಘಡನವದೆಹಲಿಮೃತ
Advertisement
Next Article