ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜೆಎನ್‌ಯುನಲ್ಲಿ ಪ್ರತಿಭಟನೆಗೆ 20 ಸಾವಿರ, ದೇಶ ವಿರೋಧಿ ಘೋಷಣೆಗೆ 10 ಸಾವಿರ ರೂ. ದಂಡ

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಷ್ಟೇ ಅಲ್ಲ ಭಾರತ ವಿರೋಧಿ ಘೋಷಣೆ, ಜಾತಿ, ಸಮುದಾಯ, ಧರ್ಮಗಳ ನಿಂದನೆ, ಅವಹೇಳನ, ಘೋಷಣೆ ಕೂಗಿದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಜೆಎನ್‌ಯು ವಿಶ್ವವಿದ್ಯಾಲಯದ ಶಿಸ್ತು ಸಮಿತಿ ಹೊಸ ನಿಯಮ ಜಾರಿಗೊಳಿಸಿದೆ.
10:02 PM Dec 11, 2023 IST | Umesha HS

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ.
ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಇಷ್ಟೇ ಅಲ್ಲ ಭಾರತ ವಿರೋಧಿ ಘೋಷಣೆ, ಜಾತಿ, ಸಮುದಾಯ, ಧರ್ಮಗಳ ನಿಂದನೆ, ಅವಹೇಳನ, ಘೋಷಣೆ ಕೂಗಿದರೆ 10,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಜೆಎನ್‌ಯು ವಿಶ್ವವಿದ್ಯಾಲಯದ ಶಿಸ್ತು ಸಮಿತಿ ಹೊಸ ನಿಯಮ ಜಾರಿಗೊಳಿಸಿದೆ.

Advertisement

ಭಾರತ ವಿರೋಧಿ ಘೋಷಣೆ, ಪ್ರತಿಭಟನೆ, ಧಾರ್ಮಿಕ ವಿರೋಧಿ ಘೋಷಣೆ ಸೇರಿದಂತೆ ಹಲವು ಕಾರಣಗಳಿಂದ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯ ದೇಶದಲ್ಲಿ ಸದ್ದು ಮಾಡಿದೆ. ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ಮಾಡುವ ಮೂಲಕ ದೇಶದಲ್ಲಿ ಜೆಎನ್‌ಯು ವಿವಾದದ ಕೇಂದ್ರಬಿಂದುವಾಗಿತ್ತು. ಆದರೆ ಹೊಸ ನೀತಿಯಿಂದ ಪ್ರತಿಭಟನೆ, ಹಿಂಸಾಚಾರ ನಡೆಸುವ ವಿದ್ಯಾರ್ಥಿಗಳಿಗೆ ಹಿನ್ನಡೆಯಾಗಿದೆ. ಘೋಷಣಾ ವಾಕ್ಯ, ಪ್ಯಾಂಪ್ಲೇಟ್, ಪೋಸ್ಟರ್, ಪ್ಲಕಾರ್ಡ್ ಸೇರಿದಂತೆ ನಿಯಮ ಬಾಹಿರ ನಡೆ ವಿರುದ್ಧವೂ ಕ್ರಮಕೈಗೊಳ್ಳಲಾಗುತ್ತದೆ ಎಂದು ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಹೇಳಿದೆ.

Advertisement
Advertisement
Tags :
GOVERNMENTindiauniversityನೀತಿನೆಹರುಪ್ರತಿಭಟನೆಭಾರತವಿದ್ಯಾರ್ಥಿಗಳುವಿಶ್ವವಿದ್ಯಾಲಯಸರ್ಕಾರ
Advertisement
Next Article