ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

29ನೇ "ಆಳ್ವಾಸ್‌ ವಿರಾಸತ್‌-2023" ಕ್ಕೆ ಇಂದು ಚಾಲನೆ

ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.
09:02 AM Dec 14, 2023 IST | Ashika S

ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.

Advertisement

29ನೇ  ವಿರಾಸತ್‌ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿವೆ.

ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್‌ ವೇದಿಕೆ ಸಜ್ಜಾಗಿದ್ದರೆ, ಸಪ್ತ ಮೇಳಗಳು ದಿನವಿಡೀ ನಡೆದು ಯಾವುದೇ ಆಸಕ್ತಿ ಇರುವವರಿಗೂ ಮನಮುದಗೊಳಿಸಲಿವೆ. ದೀಪಾಲಂಕಾರ, ಕಲಾಕೃತಿಗಳು, ಪುಷ್ಪ-ಫಲಗಳು ಕಣ್ಮನ ಸೆಳೆಯುತ್ತಿವೆ.

Advertisement

ವಿರಾಸತ್‌ ನಡೆಯುವ ವಿದ್ಯಾಗಿರಿ ಆವರಣದ ತುಂಬಾ ಸುಮಾರು ಸಾವಿರಕ್ಕೂ ಅಧಿಕ ಕಲಾಕೃತಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತಿವೆ. ವೀರಪುರುಷರು, ಪ್ರಾಣಿ-ಪಕ್ಷಿಗಳು, ಸಾಂಸ್ಕೃತಿಕ ನಾಯಕರು, ದೈವ-ದೇವರು, ಸ್ವಾತಂತ್ರ್ಯ ಹೋರಾಟಗಾರರು, ಪುಟಾಣಿಗಳ ನೆಚ್ಚಿನ ಕಾರ್ಟೂನ್ ಪಾತ್ರಗಳು, ತಾಯಿಯ ಮಮತೆ, ಬುದ್ಧನ ಧ್ಯಾನ, ನಗಿಸುವ ಮೋಟು, ಪ್ರಾದೇಶಿಕ ಕಲಾಪ್ರಕಾರಗಳ ಕಲಾಕೃತಿಗಳು ಮನ ಸೆಳೆಯುತ್ತವೆ. ಪ್ರಾಂಗಣದುದ್ದಕ್ಕೂ ಹೆಜ್ಜೆ ಹಾಕಿದಂತೆ ಆನೆ, ಜಿರಾಫೆ, ಎತ್ತು, ಮಹಿಷಾಸುರ, ಯಕ್ಷಗಾನ, ಎತ್ತಿನ ಬಂಡಿ, ಚಕ್ರ, ಗಣಪತಿ, ಸಂಗೊಳ್ಳಿ ರಾಯಣ್ಣ, ಡೊಳ್ಳು ಕುಣಿತ, ಅಂಬೇಡ್ಕರ್‌, ವೀರಗಾಸೆ ಕಥಕ್ಕಳಿ ಪ್ರತಿಮೆಗಳನ್ನು ಕಾಣಬಹುದು.

Advertisement
Tags :
“ಆಳ್ವಾಸ್‌ ವಿರಾಸತ್‌-2023LatetsNewsNewsKannadaವೈವಿಧ್ಯಶ್ರೀಮಂತಿಕೆಸಂಸ್ಕೃತಿಸೊಬಗು
Advertisement
Next Article