ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದ್ವಿತೀಯ ಪಿಯುಸಿ ಫಲಿತಾಂಶ: ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು ಉತ್ತಮ ಸಾಧನೆ

ಏ.10 ರಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾದ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 98.65% ಹಾಗೂ ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶವನ್ನು ಗಳಿಸುವುದರ ಮೂಲಕ ಉತ್ತಮ ಸಾಧನೆಗೈದಿದೆ.
05:39 PM Apr 11, 2024 IST | Ashitha S

ನಿಟ್ಟೆ: ಏ.10 ರಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಯಾದ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 98.65% ಹಾಗೂ ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶವನ್ನು ಗಳಿಸುವುದರ ಮೂಲಕ ಉತ್ತಮ ಸಾಧನೆಗೈದಿದೆ.

Advertisement

ವಿಜ್ಞಾನ ವಿಭಾಗದಲ್ಲಿ ನಿಶ್ಮಿತ್ ಅವರು 600 ರಲ್ಲಿ 588 ಅಂಕಗಳನ್ನು, ಕು.ಶರೋನ್ ನೋರಾನ್ಹಾ 586 ಅಂಕಗಳು ಹಾಗೂ ಕು.ನೇಹಾ 584 ಅಂಕಗಳನ್ನು ಗಳಿಸಿರುವರು. ವಾಣಿಜ್ಯ ವಿಭಾಗದಲ್ಲಿ ಕು. ಸನ್ನಿಧಿ ಶೆಟ್ಟಿ ಅವರು 600 ರಲ್ಲಿ 588 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೆ 10 ನೇ ರಾಂಕ್ ಪಡೆದರೆ, ಕು.ಜೆನಿಶಾ ಫೆರ್ನಾಡಿಂಸ್ 583 ಹಾಗೂ ಕು.ಸನ್ನಿಧಿ 582 ಅಂಕಗಳನ್ನು ಗಳಿಸುವುದರೊಂದಿಗೆ ಉತ್ತಮ ಸಾಧನೆಗೈದಿರುತ್ತಾರೆ.


ವಿಜ್ಞಾನ ವಿಭಾಗದಲ್ಲಿ 89 ಮಂದಿಗೆ ಡಿಶ್ಟಿಂಗ್ಶನ್, 57 ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸ್ ಆದರೆ ವಾಣಿಜ್ಯ ವಿಭಾಗದಲ್ಲಿ 49 ಮಂದಿಗೆ ಡಿಶ್ಟಿಂಗ್ಶನ್ ಹಾಗೂ 59 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು. ವಿಜ್ಞಾನ ವಿಭಾಗದಲ್ಲಿ ಓರ್ವ ಹಾಗೂ ವಾಣಿಜ್ಯ ವಿಭಾಗದಲ್ಲಿ 6 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವರು.
Advertisement

ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಕಾಲೇಜಿನ ಸಿಬ್ಬಂದಿವರ್ಗದವರು ಅಭಿನಂದಿಸಿರುವರು.

Advertisement
Tags :
indiaKARNATAKAಮಂಗಳೂರು
Advertisement
Next Article