ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.
10:30 AM May 09, 2024 IST | Nisarga K
ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ ನಾಲ್ಕು ವರ್ಷಗಳ ಪದವಿ ರದ್ದು ಮಾಡಿದೆ.

Advertisement

ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಂಡ ನಂತರ ಪದವಿ ತರಗತಿಗಳು ಪ್ರವೇಶ ಪಡೆದು ವಿವಿಧ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ ನಾಲ್ಕು ವರ್ಷಗಳ ಆನರ್ಸ್‌ ಪದವಿಗೆ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳ ಬೇಡಿಕೆ, ಕಾಲೇಜುಗಳ ಮೂಲಸೌಕರ್ಯಗಳನ್ನು ಪರಿಗಣುಸಿ, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಸಂಖ್ಯೆಗೆ ಅನುಗುಣವಾಗಿ ನಾಲ್ಕನೇ ವರ್ಷದ ಪದವಿಗೆ ಅಗತ್ಯವಾದ ಸೂಕ್ತ ಕಾಲೇಜು ಅಥವಾ ಕೇಂದ್ರಗಳನ್ನು ವಿಶ್ವವಿದ್ಯಾಲಯಗಳು ಆಯ್ಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜುಗಳಲ್ಲಿ ಕೋರ್ಸ್‌ ಲಭ್ಯವಿಲ್ಲದುದ್ದರೆ ಸಮೀಪದ ಕಾಲೇಜುಗಳಲ್ಲಿ ಪ್ರವೇಶ ನೀಡಬೇಕು ಎಂದು ಸೂಚಿಸಲಾಗಿದೆ.

2021-22 ಸಾಲಿನಿಂದ 2023-24ರವರೆಗೆ ಪ್ರವೇಶ ಪಡೆದವರು ನಾಲ್ಕು ವರ್ಷಗಳ ಆನರ್ಸ್‌ ಪದವಿ ಪಡೆದರೆ ಅಂಥವರು ಒಂದು ವರ್ಷದ ಏಕೀಕೃತ ಸ್ನಾತಕೋತ್ತರ ಪದವಿ ಮಾಡಬಹುದು. ಮೂರು ವರ್ಷದ ಪದವಿಗೆ ನಿರರ್ಗಮಿಸಲು ಬಯಸುವವರು ಹಿಂದಿನಂತೆ ಎರಡು ವರ್ಷಗಳ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯಬಹುದು. ಇನ್ನೂ 2021-22ನೇ ಸಾಲಿಗಿಂತ ಹಿಂದೆ ಇದ್ದ ರೀತಿಯೇ 2024ನೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ನಿಯಮಗಳು ಇರಲಿವೆ.

Advertisement

Advertisement
Tags :
3yearsbengalurudegreedepartmentEDUCATIONLatestNewsNewsKarnataka
Advertisement
Next Article