ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸದ್ಯದಲ್ಲೆ ಕಾಂಗ್ರೆಸ್ ನಿಂದ 30-40 ಶಾಸಕರು ಹೊರಗೆ ಬರ್ತಾರೆ: ನಳಿನ್ ಕುಮಾರ್ ಸ್ಟೋಟಕ ಹೇಳಿಕೆ

ಕಾಂಗ್ರೆಸ್ ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ.
12:56 PM Nov 21, 2023 IST | Ramya Bolantoor

ಮಂಗಳೂರು: ಕಾಂಗ್ರೆಸ್ ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಬಾಗವಾಗ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

Advertisement

ಇಂದು ನಗರದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ. ಕೆಲವೇ ದಿನಗಳಲ್ಲಿ ಕಾಂಗ್ರೆಸ್  ನಿಂದ 30-40 ಶಾಸಕರು ಹೊರಗೆ ಬರ್ತಾರೆ. ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ‌ ಬರ್ತಾರೆ ಅಂತ ದಾರಿ ತಪ್ಪಿಸ್ತಾ ಇದ್ದಾರೆ ಎಂದರು.

ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ.ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ.

Advertisement

ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು ಎಂದು ಹೇಳಿದರು.

ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗ್ತಾ ಇಲ್ಲ.ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಹೇಳಿದರು.

ನಾಳೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರನ್ನ ಮಂಗಳೂರು ಏರ್ಪೋರ್ಟ್ ನಿಂದ ಸ್ವಾಗತ ಮಾಡಲಿದ್ದೇವೆ. ಅಲ್ಲಿಂದ ಮೆರವಣಿಗೆ ಮಾಡಿ ಮಂಗಳೂರಿನ ಸಿ.ವಿ.ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ನಂತರ ಅವರು ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ನಳಿನ್‌ ಕುಮಾರ್‌ ತಿಳಿಸಿದರು.

Advertisement
Tags :
BJPLatestNewsLatetsNewsnalinkumarNewsKannadaPOLITICSಕಾಂಗ್ರೆಸ್ಮಂಗಳೂರು
Advertisement
Next Article