ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್: ವಿತ್ತ ಸಚಿವೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನ ಯಶಸ್ವಿಯಾಗಿ ಮುಂದುವರೆದಿದೆ. ನಾವು 3 ಕೋಟಿ ಮನೆಗಳ ಗುರಿಯ ಸನಿಹದಲ್ಲೇ ಇದ್ದೇವೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.
11:55 AM Feb 01, 2024 IST | Ashitha S

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನ ಯಶಸ್ವಿಯಾಗಿ ಮುಂದುವರೆದಿದೆ. ನಾವು 3 ಕೋಟಿ ಮನೆಗಳ ಗುರಿಯ ಸನಿಹದಲ್ಲೇ ಇದ್ದೇವೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣಕ್ಕೆ ಅನುದಾನ ಒದಗಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

Advertisement

ಹಾಗೆಯೇ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿದರು. ಪ್ರವಾಸೋದ್ಯಮ ಕೇತ್ರದಲ್ಲಿ ಇದೀಗ ಭಾರೀ ಬದಲಾವಣೆ ಆಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಗಮನ ಹರಿಸಿದೆ. ಎಲೆಕ್ಟ್ರಿಕಲ್​ ಬಸ್​, ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 40 ಸಾವಿರ ರೈಲ್ವೆ ಕೋಚ್​ಗಳ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ. ಸಣ್ಣಪುಟ್ಟ ನಗರಗಳಿಗೂ ,ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುವುದು. ಮೆಟ್ರೋ ಮತ್ತು ನಮೋ ಭಾರತ್ ರೈಲ್ವೆಗೆ ಹೆಚ್ಚಿನ ಹೊತ್ತು. ವಿಮಾನಯಾನ ಕ್ಷೇತ್ರಕ್ಕೆ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡಲಾಗುತ್ತಿದೆ. ಸಂಶೋಧನೆ, ತಂತ್ರಜ್ಞಾನಕ್ಕೆ ಹೆಚ್ಚಿನ ಹೊತ್ತು. ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್. ದೇಶದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಬದಲಾವಣೆ ಆಗಿದೆ. ಮತ್ಸ್ಯ ಯೋಜನೆಯಿಂದ 55 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಸುವ ಗುರಿಯಿದೆ. ಮತ್ಸ್ಯ ಸಂಪದ ಯೋಜನೆಯಿಂದ ಮೀನುಗಾರಿಕೆ ಲಾಭ ಸಿಗಲಿದೆ ಎಂದರು. 1 ಕೋಟಿ ಮನೆಗಳ ಮೇಲೆ ಸೋಲಾರ್ ಪ್ಯಾನಲ್ ಅಳವಡಿಕೆ ಮಾಡಲಾಗುತ್ತದೆ.

Advertisement
Advertisement
Tags :
BreakingNewsGOVERNMENTindiaKARNATAKALatestNewsNewsKannadaಪ್ರಧಾನಿ ನರೇಂದ್ರ ಮೋದಿವಿದ್ಯುತ್
Advertisement
Next Article