ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರನೇ ಟೆಸ್ಟ್: 400ರ ಗಡಿಯತ್ತ ಟೀಮ್ ಇಂಡಿಯಾ

ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನದಾಟದ ಆರಂಭದಲ್ಲೇ ಭಾರತ ಕುಸಿತ ಕಂಡಿತು. ಆದರೆ, ರವಿಚಂದ್ರನ್ ಅಶ್ವಿನ್ ಹಾಗೂ ಧ್ರುವ್ ಜುರೆಲ್ ಆಸರೆಯಾಗಿ ನಿಂತಿದ್ದು ತಂಡದ ಮೊತ್ತ 400ರ ಗಡಿಯತ್ತ ತಲುಪಿದೆ.
12:04 PM Feb 16, 2024 IST | Ashika S

ರಾಜ್ಕೋಟ್​: ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್​ನ ಎರಡನೇ ದಿನದಾಟದ ಆರಂಭದಲ್ಲೇ ಭಾರತ ಕುಸಿತ ಕಂಡಿತು. ಆದರೆ, ರವಿಚಂದ್ರನ್ ಅಶ್ವಿನ್ ಹಾಗೂ ಧ್ರುವ್ ಜುರೆಲ್ ಆಸರೆಯಾಗಿ ನಿಂತಿದ್ದು ತಂಡದ ಮೊತ್ತ 400ರ ಗಡಿಯತ್ತ ತಲುಪಿದೆ.

Advertisement

ಸದ್ಯ ಭೋಜನ ವಿರಾಮದ ವೇಳೆಗೆ ಭಾರತ 7 ವಿಕೆಟ್ ಕಳೆದುಕೊಂಡು 388 ರನ್ ಗಳಿಸಿದೆ. ಅಶ್ವಿನ್ 25 ಹಾಗೂ ಧ್ರುವ್ 31 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ.

ಮೊದಲ ದಿನ ಭಾರತದ ಪರವಾಗಿ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಶತಕ ಗಳಿಸಿದರು. ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡುತ್ತಿರುವ ಸರ್ಫರಾಜ್ ಖಾನ್ ಕೂಡ ಅರ್ಧಶತಕ ಗಳಿಸಿದರು.

Advertisement

ಇಂದು ಎರಡನೇ ದಿನ ಜಡೇಜಾ ಹಾಗೂ ಕುಲ್ದೀಪ್ ಯಾದವ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 110 ರನ್ ಗಳಿಸಿದ್ದ ರವೀಂದ್ರ ಜಡೇಜಾ ಇಂದು ಕೇವಲ 2 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕುಲ್ದೀಪ್ ಯಾದವ್ 4 ರನ್​ಗೆ ನಿರ್ಗಮಿಸಿದರು. ಬಳಿಕ ಆರ್. ಅಶ್ವಿನ್ ಹಾಗೂ ಧ್ರುವ್ ಜುರೆಲ್ ಅರ್ಧಶತಕದ ಜೊತೆಯಾಟ ಆಡಿ ಮುನ್ನುಗ್ಗುತ್ತಿದ್ದಾರೆ.

ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್ ಪ್ಲೇಯಿಂಗ್ XI: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್ ವುಡ್, ಜೇಮ್ಸ್ ಆಂಡರ್ಸನ್.

Advertisement
Tags :
CRICKET TEST MATCHLatetsNewsNewsKannadaಟೆಸ್ಟ್‌ಭಾರತ
Advertisement
Next Article