ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಪಿಂಗ್ ಮಾಲ್​ನಲ್ಲಿ ಅಗ್ನಿ ದುರಂತ: 44 ಜನರು ಸಾವು !

ಢಾಕಾದಲ್ಲಿ ತಡರಾತ್ರಿ ಭೀಕರ ಅಗ್ನಿ ದುರಂತ ನಡೆದಿದೆ. ಬೈಲಿ ರೋಡ್ ಪ್ರದೇಶದಲ್ಲಿರುವ ಆರು ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಸಂಭವಿಸಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
10:41 AM Mar 01, 2024 IST | Ashitha S

ಬಾಂಗ್ಲಾದೇಶ: ಢಾಕಾದಲ್ಲಿ ತಡರಾತ್ರಿ ಭೀಕರ ಅಗ್ನಿ ದುರಂತ ನಡೆದಿದೆ. ಬೈಲಿ ರೋಡ್ ಪ್ರದೇಶದಲ್ಲಿರುವ ಆರು ಅಂತಸ್ತಿನ ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಸಂಭವಿಸಿ ಕನಿಷ್ಠ 44 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisement

ಅಲ್ಲದೇ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗುರುವಾರ ರಾತ್ರಿ ಢಾಕಾದ ಡೌನ್‌ಟೌನ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಸಮಂತಾ ಲಾಲ್ ಸೇನ್ ಹೇಳಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಅಗ್ನಿಶಾಮಕ ದಳದವರು ರಕ್ಷಣೆಗೆ ದೌಡಾಯಿಸಿದ್ದಾರೆ. 22 ಮಂದಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿ ಒಟ್ಟು 33 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 10 ಮಂದಿಯನ್ನು ಶೇಖ್ ಹಸೀನಾ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬರ್ನ್ ಮತ್ತು ಪ್ಲಾಸ್ಟಿಕ್ ಸರ್ಜರಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Advertisement

 

 

 

 

Advertisement
Tags :
BANGLADESHFIREindiaKARNATAKALatestNewsNewsKannadaಅಗ್ನಿನವದೆಹಲಿ
Advertisement
Next Article