ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಿಎಸ್‌ಐ ಸೇರಿ ವಿವಿಧ ಹುದ್ದೆಗಳಿಗೆ 4547 ಮಂದಿ ನೇಮಕ : ಡಾ. ಜಿ.ಪರಮೇಶ್ವರ್‌

ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳು ಮತ್ತು ಮುಂದಿನ ಆರು ತಿಂಗಳಲ್ಲಿ 4,547 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.
09:55 AM Nov 23, 2023 IST | Ramya Bolantoor

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳು ಮತ್ತು ಮುಂದಿನ ಆರು ತಿಂಗಳಲ್ಲಿ 4,547 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ಸದ್ಯ ಹೈಕೋರ್ಟ್‌ ಸೂಚನೆ ಮೇರೆಗೆ 545 ಪಿಎಸ್‌ಐ ಹುದ್ದೆಗಳಿಗೆ ಡಿಸೆಂಬರ್‌ನಲ್ಲಿ ಮರುಪರೀಕ್ಷೆ ನಡೆಸುತ್ತಿದೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 4,547 ಹುದ್ದೆಗಳಲ್ಲಿ 1547 ಮಂದಿ ಪಿಎಸ್‌ಐ ಹಾಗೂ 3 ಸಾವಿರ ಕಾನ್ಸ್‌ಟೇಬಲ್‌ ಹುದ್ದೆಗಳು ಇವೆ. ಪಿಎಸ್‌ಐ ಹುದ್ದೆಗಳ ಪೈಕಿ ಹೈಕೋರ್ಟ್‌ ಸೂಚನೆಯಂತೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಡಿಸೆಂಬರ್‌ನಲ್ಲಿ ಪರೀಕ್ಷೆ ನಡೆಯಲಿದೆ.

ನಂತರ ಈಗಾಗಲೆ ನೋಟಿಫಿಕೇಷನ್‌ ಹೊರಡಿಸಿರುವ 402 ಪಿಎಸ್‌ಐ ಹುದ್ದೆ ಭರ್ತಿಗೆ ಚಾಲನೆ ನೀಡಲಾಗುವುದು. ತದನಂತರ 600 ಮಂದಿ ಪಿಎಸ್‌ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಒಟ್ಟು 6 ತಿಂಗಳಲ್ಲಿ 1,547 ಪಿಎಸ್‌ಐಗಳ ನೇಮಕ ಮಾಡಿಕೊಳ್ಳಲಾಗುವುದು. ಅದರ ಜತೆಗೆ ಎಎಸ್‌ಐ ಹುದ್ದೆಯಲ್ಲಿರುವವರಿಗೆ ಎಸ್‌ಐ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನೂ ಆರಂಭಿಸಲಾಗಿದೆ ಎಂದರು.

Advertisement

Advertisement
Tags :
KARNATAKALatestNewsminsterNewsKannadaಡಾ. ಜಿ ಪರಮೇಶ್ವರ್ಬೆಂಗಳೂರು
Advertisement
Next Article