ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳ ರಕ್ಷಣೆ ಮಾಡಿದ ಸಿಸಿಬಿ

ನಗರದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು  ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
01:26 PM Apr 12, 2024 IST | Ashika S

ಬೆಂಗಳೂರು: ನಗರದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 47 ಅಪ್ರಾಪ್ತ ಮಕ್ಕಳನ್ನು  ಸಿಸಿಬಿ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

Advertisement

ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು 36 ಮಹಿಳೆಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಂಜಾನ್ ಹಿನ್ನೆಲೆಯಲ್ಲಿ ಅಪ್ರಾಪ್ತ ಮಕ್ಕಳು ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಮಸೀದಿಯ ಬಳಿ ಭಿಕ್ಷಾಟನೆಯಲ್ಲಿ ತೊಡಗಿದ್ದರು. ಈ ವೇಳೆ ಸಿಸಿಬಿ ಪೊಲೀಸರು ಮತ್ತು ಮಹಿಳಾ ಮಕ್ಕಳ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ರಕ್ಷಣೆ ಮಾಡಿದ್ದಾರೆ.

Advertisement

1 ತಿಂಗಳಿಂದ 12 ತಿಂಗಳು ವಯಸ್ಸಿನ 4 ಗಂಡು ಹಾಗೂ 2 ಹೆಣ್ಣು ಸೇರಿದಂತೆ 6 ಮಕ್ಕಳು, 1-3 ವರ್ಷದ ಒಳಗಡೆ ಇರುವ 6 ಗಂಡು ಮತ್ತು 6 ಹೆಣ್ಣು ಸೇರಿದಂತೆ 12 ಮಕ್ಕಳ‌, 3-6 ವರ್ಷ ವಯಸ್ಸಿನ 4 ಹೆಣ್ಣು ಮತ್ತು 2 ಗಂಡು ಸೇರಿದಂತೆ 6 ಮಕ್ಕಳು ಮತ್ತು 6 ವರ್ಷ ಮೇಲ್ಪಟ್ಟ 5 ಹೆಣ್ಣು 18 ಗಂಡು ಸೇರಿದಂತೆ 23 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.

ಸದ್ಯ ಭಿಕ್ಷಾಟನೆಯಲ್ಲಿ ತೊಡಗಿದ್ದ ಮಕ್ಕಳನ್ನು ಪೊಲೀಸರು ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಗೆ ನೀಡಿದ್ದಾರೆ.

 

Advertisement
Tags :
LatetsNewsminor childrenNewsKarnatakarescued
Advertisement
Next Article