ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಂಗ್ಲರಿಗೆ ಸೋಲು: ಸರಣಿ ವಶಪಡಿಸಿಕೊಂಡ ಟೀಮ್ ಇಂಡಿಯಾ

ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 3-1 ಅಂತರದಿಂದ ಮುನ್ನಡೆ ಸಾಧಿಸಿದೆ.
02:15 PM Feb 26, 2024 IST | Ashitha S

ರಾಂಚಿ: ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 3-1 ಅಂತರದಿಂದ ಮುನ್ನಡೆ ಸಾಧಿಸಿದೆ.

Advertisement

ಈ ಮೂಲಕ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಿತು. 120 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಶುಭ್​ಮನ್ ಗಿಲ್ ಹಾಗೂ ಧ್ರುವ್ ಜುರೇಲ್ ಆಸರೆಯಾದರು. 6ನೇ ವಿಕೆಟ್​ಗೆ 72 ರನ್​ಗಳ ಜೊತೆಯಾಟವಾಡುವ ಮೂಲಕ ಗಿಲ್ (52) – ಧ್ರುವ್ (39) ಜೋಡಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.

ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 106 ರನ್​ಗಳ ಭರ್ಜರಿ ಜಯ ದಾಖಲಿಸಿತು. ಹಾಗೆಯೇ 3ನೇ ಟೆಸ್ಟ್ ಪಂದ್ಯದಲ್ಲಿ 434 ರನ್​ಗಳಿಂದ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿದು ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿತ್ತು. ಇದೀಗ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿತು. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ ಹ್ಯಾಟ್ರಿಕ್ ಸೋಲುಣಿಸಿದೆ.

Advertisement

 

 

Advertisement
Tags :
IND vs ENindiaLatestNewsNewsKannadaTEAM INDIA
Advertisement
Next Article