For the best experience, open
https://m.newskannada.com
on your mobile browser.
Advertisement

ದೇವಸ್ಥಾನಗಳಿಗೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ

ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಚೈತ್ರ ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ ಭಾರತದ ಪ್ರಮುಖ ಎರಡು ದೇವಾಲಯಗಳಾದ ಒಡಿಶಾದ ಪುರಿ ಜಗನ್ನಾಥ ದೇವಾಲಯ ಮತ್ತು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.
02:06 PM Apr 18, 2024 IST | Chaitra Kulal
ದೇವಸ್ಥಾನಗಳಿಗೆ 5 ಕೋಟಿ ರೂ  ದೇಣಿಗೆ ನೀಡಿದ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ

ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಚೈತ್ರ ನವರಾತ್ರಿಯ ಅಷ್ಟಮಿಯ ಸಂದರ್ಭದಲ್ಲಿ ಭಾರತದ ಪ್ರಮುಖ ಎರಡು ದೇವಾಲಯಗಳಾದ ಒಡಿಶಾದ ಪುರಿ ಜಗನ್ನಾಥ ದೇವಾಲಯ ಮತ್ತು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಒಂದೊಂದು ದೇವಸ್ಥಾನಕ್ಕೂ ತಲಾ 2,51,00,000 ರೂ. ಅಂದರೆ ಒಟ್ಟು 5 ಕೋಟಿ ರೂ ದೇಣಿಗೆ ನೀಡಿದ್ದಾರೆ.

Advertisement

ಹಿಂದೂ ಧರ್ಮ ಹಾಗೂ ದೇವಾಲಯದ ಬಗ್ಗೆ ಅಪಾರ ಗೌರವ ಹೊಂದಿರುವ ಅಂಬಾನಿ ಕುಟುಂಬ ಆಗಾಗ ಹಲವು ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ವರ್ಷ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿದೆ.

ಇತ್ತೀಚೆಗಷ್ಟೇ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವು ಜಾಮ್‌ನಗರದಲ್ಲಿ ಬಹಳ ವಿಜೃಂಭಣೆಯಿಂದ ನಡೆದಿತ್ತು. ಜೊತೆಗೆ ಇವರ ಮದುವೆ ಜುಲೈನಲ್ಲಿ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

Advertisement
Tags :
Advertisement