For the best experience, open
https://m.newskannada.com
on your mobile browser.
Advertisement

ನಾಳೆ 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಫಲಿತಾಂಶವನ್ನು ನಾಳೆ ಬೆಳಗ್ಗೆ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
06:41 PM Apr 07, 2024 IST | Chaitra Kulal
ನಾಳೆ 5  8  9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಫಲಿತಾಂಶವನ್ನು ನಾಳೆ ಬೆಳಗ್ಗೆ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

Advertisement

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿದೆ.

ಈ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಏ.2 ರೊಳಗಾಗಿ ಬ್ಲಾಕ್ ಹಂತದಲ್ಲಿ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ಮರುರವಾನಿಸಲು ಸೂಚಿಸಲಾಗಿತ್ತು. ಹೀಗಾಗಿ ಆಯುಕ್ತರ ಸುತ್ತೋಲೆಯಂತೆ ಏ.8ರಂದು ಸಮುದಾಯದತ್ತ ಶಾಲಾ ದಿನದಂದು 1 ರಿಂದ 9 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲು ಸೂಚಿಸಿರುತ್ತಾರೆ.

Advertisement

ಅದೇ ರೀತಿ 5, 8 ಮತ್ತು 9ನೇ ತರಗತಿಗಳ ಮೌಲ್ಯಾಂಕನದ ಫಲಿತಾಂಶವನ್ನು ಏ.8 ರಂದು ಬೆಳಗ್ಗೆ 9 ಗಂಟೆಯೊಳಗೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಫಲಿತಾಂಶ ಪ್ರಕಟಿಸಬೇಕು ಎಂದು ಶಾಲೆಗಳ ಮುಖ್ಯಶಿಕ್ಷಕರು, ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.

Advertisement
Tags :
Advertisement