ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ನಡೆಯಲಿದ್ದು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.
06:54 AM May 20, 2024 IST | Nisarga K
ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲಖನೌ: ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮತದಾನ ನಡೆಯಲಿದ್ದು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.

Advertisement

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ.

Advertisement
Advertisement
Tags :
5phaseELECTIONLatestNewslokasabha electionNewsKarnatakavoting
Advertisement
Next Article