ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೊದಲ ದಿನವೇ 61 ಕೋಟಿ ರೂ. ಬಾಚಿದ ʼಅನಿಮಲ್‌ʼ

ರಿಲೀಸ್‌ ಗೆ ಮೊದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗುವ ಸೂಚನೆ ಸಿಕ್ಕಿದೆ.
11:20 AM Dec 02, 2023 IST | Ashika S

ಮುಂಬೈ: ರಿಲೀಸ್‌ ಗೆ ಮೊದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಸಿನಿಮಾ ಬ್ಲಾಕ್​ಬಸ್ಟರ್ ಹಿಟ್ ಆಗುವ ಸೂಚನೆ ಸಿಕ್ಕಿದೆ.

Advertisement

ಡಿಸೆಂಬರ್ 1ರಂದು ರಿಲೀಸ್ ಆದ ಈ ಸಿನಿಮಾ ಮೊದಲ ದಿನ 60 ಕೋಟಿ ರೂಪಾಯಿ ಗಳಿಕೆ ಮಾಡಿದೆ. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರ ವೃತ್ತಿ ಜೀವನದಲ್ಲೇ ಮೊದಲ ದಿನ ಇಷ್ಟು ದೊಡ್ಡ ಗಳಿಕೆ ಆಗಿದ್ದು ಇದೇ ಮೊದಲು. ಮುಂದಿನ ದಿನಗಳಲ್ಲಿ ಸಿನಿಮಾ ಅಬ್ಬರದ ಗಳಿಕೆ ಮಾಡುವ ಸಾಧ್ಯತೆ ಇದೆ.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಹಿಂದಿ, ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ರಿಲೀಸ್ ಆಗಿದೆ. ಆರಂಭಿಕ ವರದಿಗಳ ಪ್ರಕಾರ ಈ ಚಿತ್ರ ಹಿಂದಿಯಲ್ಲಿ 50.50 ಕೋಟಿ ರೂಪಾಯಿ ಬಾಚಿಕೊಂಡಿದೆ. ತೆಲುಗು ವರ್ಷನ್​ನಿಂದ 10 ಕೋಟಿ ರೂಪಾಯಿ ಆಗಿದೆ. ಉಳಿದ ಭಾಷೆಗಳಿಂದ 50 ಲಕ್ಷ ರೂಪಾಯಿ ಗಳಿಕೆ ಆಗಿದೆ. ‘ಅನಿಮಲ್’ ಸಿನಿಮಾಗೆ ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಣಬೀರ್, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್ ನಟಿಸಿದ್ದಾರೆ.

Advertisement

Advertisement
Tags :
LatetsNewsNewsKannadaಅನಿಮಲ್ರಣಬೀರ್ ಕಪೂರ್ರಶ್ಮಿಕಾ ಮಂದಣ್ಣ
Advertisement
Next Article