ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಶೇ.75ರಷ್ಟು ಕೋವಿಡ್ ಏರಿಕೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪ್ರಕರಣ ಶೇ.75ರಷ್ಟು ಏರಿಕೆ ಕಂಡಿದೆ.
03:24 PM Jan 04, 2024 IST | Ramya Bolantoor

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಪ್ರಕರಣ ಶೇ.75ರಷ್ಟು ಏರಿಕೆ ಕಂಡಿದೆ.

Advertisement

ಕರ್ನಾಟಕದಲ್ಲಿ ಹೊಸ ಕೋವಿಡ್ -19 ಸೋಂಕುಗಳು ಬುಧವಾರ 260 ಪ್ರಕರಣಗಳಿಗೆ ತಲುಪಿದೆ.

ಹೊಸ 260 ಪ್ರಕರಣಗಳಲ್ಲಿ 134 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿದೆ. ನಗರದಲ್ಲಿ 624 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ತಿಳಿಸಿವೆ. ದಕ್ಷಿಣ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1,175 ಕ್ಕೆ ಏರಿದೆ.

Advertisement

ಮೈಸೂರಿನಲ್ಲಿ 24, ಬೆಂಗಳೂರು ಗ್ರಾಮಾಂತರದಲ್ಲಿ 20, ಶಿವಮೊಗ್ಗದಲ್ಲಿ 11 ಪ್ರಕರಣಗಳು ಪತ್ತೆಯಾಗಿದೆ. ದಕ್ಷಿಣ ಕನ್ನಡ ಮತ್ತು ಧಾರವಾಡದಲ್ಲಿ ತಲಾ 9, ಮಂಡ್ಯ ಮತ್ತು ರಾಮನಗರದಲ್ಲಿ ಕ್ರಮವಾಗಿ 8 ಮತ್ತು 7 ಹೊಸ ಪ್ರಕರಣಗಳು ವರದಿಯಾಗಿವೆ. ತುಮಕೂರಿನಲ್ಲಿ 6, ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ ಮತ್ತು ಉತ್ತರ ಕನ್ನಡದಲ್ಲಿ 4 ಹೊಸ ಪ್ರಕರಣಗಳು ವರದಿಯಾಗಿವೆ. ದಾವಣಗೆರೆ ಮತ್ತು ವಿಜಯನಗರದಲ್ಲಿ ತಲಾ ಮೂರು ಪ್ರಕರಣಗಳು, ಬಳ್ಳಾರಿ, ಚಿತ್ರದುರ್ಗ ಮತ್ತು ಹಾಸನದಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿದೆ.

Advertisement
Tags :
COVID 19KARNATAKALatestNewsNewsKannadaಬೆಂಗಳೂರು
Advertisement
Next Article