ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೇಲ್‌ ದಾಳಿಯಿಂದ 78 ಮಂದಿ ಪ್ಯಾಲಿಸ್ತೇನಿಯರ ಸಾವು

ತಿಂಗಳುಗಳೇ ಕಳೆದರೂ ಇಸ್ರೇಲ್‌ ಹಮಾಸ್‌ ಸಂಘರ್ಷ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಂದೆಡೆ ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದರೆ, ಇನ್ನೊಂದೆಡೆ ಹಮಾಸ್ ಬಂಡುಕೋರರ ಸುರಂಗದಲ್ಲಿ ಐವರು ಒತ್ತೆಯಾಳುಗಳ ಶವ ಪತ್ತೆಯಾಗಿರುವುದಾಗಿ ವರದಿಯಾಗಿದೆ.
03:01 PM Dec 25, 2023 IST | Ashika S

ಟೆಲ್ ಅವೀವ್: ತಿಂಗಳುಗಳೇ ಕಳೆದರೂ ಇಸ್ರೇಲ್‌ ಹಮಾಸ್‌ ಸಂಘರ್ಷ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಂದೆಡೆ ಗಾಜಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದರೆ, ಇನ್ನೊಂದೆಡೆ ಹಮಾಸ್ ಬಂಡುಕೋರರ ಸುರಂಗದಲ್ಲಿ ಐವರು ಒತ್ತೆಯಾಳುಗಳ ಶವ ಪತ್ತೆಯಾಗಿರುವುದಾಗಿ ವರದಿಯಾಗಿದೆ.

Advertisement

ಗಾಜಾದ ಮಾಘಜಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ತೇನಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಉತ್ತರ ಗಾಜಾದಲ್ಲಿ ಹಮಾಸ್ ಉಗ್ರರ ಭೂಗತ ಸುರಂಗ ಜಾಲದಲ್ಲಿ ಸೆರೆಯಲ್ಲಿದ್ದ ಐವರು ಇಸ್ರೇಲಿ ಒತ್ತೆಯಾಳುಗಳ ಶವಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ.

ಗಾಜಾದ ಮೇಲೆ ಭಾನುವಾರ ರಾತ್ರಿ ಆರಂಭವಾದ ಇಸ್ರೇಲ್ ದಾಳಿ ಕ್ರಿಸ್‍ಮಸ್ ದಿನವಾದ ಸೋಮವಾರ ಬೆಳಗ್ಗೆವರೆಗೂ ಮುಂದುವರಿಯಿತು. ಈ ವೇಳೆ ಗಾಜಾದ ಅಲ್-ಬುರೇಜ್‍ನ ಮೇಲೆ ಇಸ್ರೇಲ್ ತೀವ್ರ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ ಮಾಘಜಿ ನಿರಾಶ್ರಿತರ ಶಿಬಿರದಲ್ಲಿ 70 ಮಂದಿ ಸಾವಿಗೀಡಾಗಿದ್ದಾರೆ.

Advertisement

Advertisement
Tags :
LatestNewsNewsKannadaಇಸ್ರೇಲ್‌ಒತ್ತೆಯಾಳುವೈಮಾನಿಕ ದಾಳಿಶವಸಂಘರ್ಷಹಮಾಸ್
Advertisement
Next Article