For the best experience, open
https://m.newskannada.com
on your mobile browser.
Advertisement

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ  9 ವರ್ಷದ ಬಾಲಕಿಯನ್ನು ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
11:35 AM Feb 11, 2024 IST | Ashika S
9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ  ಆರೋಪಿಯ ಬಂಧನ

ರಾಜಸ್ಥಾನ: ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ  9 ವರ್ಷದ ಬಾಲಕಿಯನ್ನು ಗದ್ದೆಗೆ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.

Advertisement

ಹಳ್ಳಿಯೊಂದರಲ್ಲಿ ಶನಿವಾರ ರಾತ್ರಿ 9 ವರ್ಷದ ಬಾಲಕಿ ತನ್ನ ಮನೆಯಲ್ಲಿ ಮಲಗಿದ್ದಳು. ರಾತ್ರಿ 9 ಗಂಟೆ ಸುಮಾರಿಗೆ ರಘುವೀರ್ ಜಾಟ್ ಅವರ ಮನೆಗೆ ಬಂದಿದ್ದ. ಆತ ಬಾಲಕಿಯನ್ನು ಎತ್ತಿಕೊಂಡು ಹೊಲಕ್ಕೆ ಎಳದೊಯ್ದಿದ್ದ. ಅಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಅಷ್ಟರಲ್ಲಿ ಬಾಲಕಿ ಕಾಣೆಯಾಗಿದ್ದನ್ನು ಕಂಡು ಮನೆಯವರು ಅಕ್ಕಪಕ್ಕದಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಕುಟುಂಬಸ್ಥರು ಹೊಲದಲ್ಲಿ ಬಾಲಕಿ ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ.

Advertisement

ಸಂತ್ರಸ್ತೆಯನ್ನು ಹಿಂದೌನ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ಮತ್ತು ವೈದ್ಯಕೀಯ ಮಂಡಳಿಯಿಂದ ಪ್ರಥಮ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆ ಬಳಿಕ ಬಾಲಕಿಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಆಕೆಯನ್ನು ಕೂಡಲೇ ಜೈಪುರದ ಜೆಕೆ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಆರೋಪಿ ರಘುವೀರ್ ಜಾಟ್ ನನ್ನು ವಶಕ್ಕೆ ಪಡೆದಿದ್ದಾರೆ.

Advertisement
Tags :
Advertisement