For the best experience, open
https://m.newskannada.com
on your mobile browser.
Advertisement

ರಷ್ಯಾದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಅರೆಸ್ಟ್‌

ಇಲ್ಲಿನ ಕನ್ಸರ್ಟ್‌ ಹಾಲ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.
06:39 PM Mar 23, 2024 IST | Chaitra Kulal
ರಷ್ಯಾದಲ್ಲಿ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಅರೆಸ್ಟ್‌

ಮಾಸ್ಕೋ: ಇಲ್ಲಿನ ಕನ್ಸರ್ಟ್‌ ಹಾಲ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಶಂಕಿತರನ್ನು ಬಂಧಿಸಲಾಗಿದೆ ಎಂದು ರಷ್ಯಾದ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಯೋತ್ಪಾದಕ ದಾಳಿಯಿಂದ 110 ಮಂದಿ ಸಾವನ್ನಪ್ಪಿದ್ದಾರೆ. 145 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ ನಾಲ್ವರು ಬಂದೂಕುಧಾರಿಗಳು ಸೇರಿದಂತೆ 11 ಶಂಕಿತರನ್ನು ಅರೆಸ್ಟ್‌ ಮಾಡಲಾಗಿದೆ. ದಾಳಿಕೋರರು ಉಕ್ರೇನ್‌ನೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಭಯೋತ್ಪಾದಕ ದಾಳಿ ನಡೆಸಿದ ನಂತರ, ಅಪರಾಧಿಗಳು ರಷ್ಯಾ-ಉಕ್ರೇನಿಯನ್ ಗಡಿಯನ್ನು ದಾಟಲು ಉದ್ದೇಶಿಸಿದ್ದರು. ಉಕ್ರೇನಿಯನ್ ಭಾಗದಲ್ಲಿ ಸೂಕ್ತ ಸಂಪರ್ಕಗಳನ್ನು ಹೊಂದಿದ್ದರು ಎಂದು ರಷ್ಯಾದ ಭದ್ರತಾ ಸಂಸ್ಥೆ ಮಾಹಿತಿ ನೀಡಿದೆ.

ರಷ್ಯಾ ಆರೋಪವನ್ನು ಉಕ್ರೇನ್‌ ಅಲ್ಲಗಳೆದಿದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಉಕ್ರೇನ್‌ ಪ್ರೆಸಿಡೆನ್ಸಿಯು ತಿಳಿಸಿದೆ. ಉಕ್ರೇನ್‌ ಸ್ಪಷ್ಟನೆ ಬೆನ್ನಲ್ಲೇ, ಇಸ್ಲಾಮಿಕ್ ಸ್ಟೇಟ್ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿದೆ. ನಮ್ಮ ಸಹಚರರು ಮಾಸ್ಕೋದ ಹೊರವಲಯದಲ್ಲಿರುವ ದೊಡ್ಡ ಸಭೆ ಮೇಲೆ ದಾಳಿ ಮಾಡಿದರು. ನಂತರ ಸುರಕ್ಷಿತವಾಗಿ ತಮ್ಮ ನೆಲೆಗಳಿಗೆ ಹಿಂದಿರುಗಿದ್ದಾರೆ ಎಂದು ತಿಳಿಸಿದೆ. ಚಹರೆ ಮರೆಮಾಚುವ ಸಮವಸ್ತ್ರ ಧರಿಸಿದ್ದ ದಾಳಿಕೋರರು ಕಟ್ಟಡ ಪ್ರವೇಶಿಸಿ ಗುಂಡು ಹಾರಿಸಿದ್ದಾರೆ. ಗ್ರೆನೇಡ್‌ ಅಥವಾ ಬಾಂಬ್‌ಗಳನ್ನು ಎಸೆದಿರಬಹುದು. ಸಭಾಂಗಣದಿಂದ ಜ್ವಾಲೆ ಮತ್ತು ಕಪ್ಪು ಹೊಗೆ ಹೊಮ್ಮುತ್ತಿರುವ ದೃಶ್ಯದ ವೀಡಿಯೋಗಳು ಎಲ್ಲೆಡೆ ವೈರಲ್‌ ಆಗಿವೆ. ಮೂರು ಹೆಲಿಕಾಪ್ಟರ್‌ಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಸಾವಿರಾರು ಮಂದಿ ಸೇರುವಷ್ಟು ವಿಸ್ತೀರ್ಣವಿದ್ದ ಕನ್ಸರ್ಟ್ ಹಾಲ್‌ ಮೇಲೆ ಯೋಜಿತ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

Advertisement
Tags :
Advertisement