For the best experience, open
https://m.newskannada.com
on your mobile browser.
Advertisement

ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಘಟನೆ ನಡೆದಿದೆ.
06:21 PM May 06, 2024 IST | Chaitra Kulal
ಸಿಹಿ ತಿಂಡಿ ವಿಚಾರಕ್ಕೆ ಮುರಿದು ಬಿದ್ದ ಮದುವೆ

ಕೊಡಗು: ವರನ ಕಡೆಯವರಿಗೆ ಸಿಹಿತಿಂಡಿ ನೀಡಿಲ್ಲ ಎಂಬ ಕಾರಣಕ್ಕೆ ಮದುವೆ ಬೇಡ ಎಂದು ಗಲಾಟೆ ಮಾಡಿದ ಘಟನೆ ಕೊಡಗು ಜಿಲ್ಲೆಯಲ್ಲಿ ಸೋಮವಾರ ಪೇಟೆಯ ಜಾನಕಿ ಕನ್ವೆನ್ಶನ್‌ ಹಾಲ್‌ನಲ್ಲಿ ಘಟನೆ ನಡೆದಿದೆ.

Advertisement

ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿ ಮತ್ತು ತುಮಕೂರು ಜಿಲ್ಲೆಯ ಯುವಕ ನೊಂದಿಗೆ ಮೇ 5ರಂದು ಮದುವೆ ನಿಶ್ಚಯಾಗಿವಾಗಿತ್ತು. ಆದರೆ ರಾತ್ರೋ ರಾತ್ರಿ ವರ ಉಂಗುರ ಕಳಚಿಕೊಟ್ಟು ಹೋಗಿದ್ದಾನೆ.

ವಿವಾಹಕ್ಕೂ ಮೊದಲು ವರನ ಕಡೆಯವರಿಂದ ವರದಕ್ಷಿಣೆ ಕೊಡುವಂತೆ ಒತ್ತಾಯವು ಕೇಳಿ ಬಂದಿತ್ತು ಎನ್ನಲಾಗಿದೆ. ಚಿನ್ನಾಭರಣ ಮತ್ತು ಬೆಂಗಳೂರಿನಲ್ಲಿ ಸೈಟ್ ಕೊಡುವಂತೆ ವರನ ಪೋಷಕರು ಒತ್ತಾಯಿಸಿದ್ದರು. ಮದುವೆ ದಿನ ಚಿನ್ನ ಕೊಟ್ಟಿಲ್ಲ ಎಂದು ಊಟದ ನೆಪ ಹೇಳಿ ಗಲಾಟೆ ತೆಗೆದು ಮದುವೆ ಬೇಡ ಎಂದು ಬಿಟ್ಟು ಹೋಗಿದ್ದಾರೆ ಎಂದು ವಧುವಿನ ಪೋಷಕರು ಆರೋಪಿಸಿದ್ದಾರೆ.

Advertisement

ವರನ ಕಡೆಯವರು ಶನಿವಾರ ಸಂಜೆಯೇ ತುಮಕೂರಿನಿಂದ ಮಂಟಪಕ್ಕೆ ಆಗಮಿಸಿದ್ದರು. ಮದುವೆಯ ಹಿಂದಿನ ದಿನ ಚಪ್ಪರ ಶಾಸ್ತ್ರದಲ್ಲಿ ವರ ಕಡೆಯವರಿಗೆ ಊಟದಲ್ಲಿ ಸಿಹಿತಿಂಡಿ ನೀಡಿಲ್ಲ, ಎಂದು ಸಣ್ಣ ಗಲಾಟೆ ತೆಗೆದಿದ್ದಾರೆ. ನಂತರ ಈ ಮದುವೆ ಗಲಾಟೆಯು ಪೊಲೀಸ್‌ ಠಾಣೆಯ ಮೆಟ್ಟಿಲೇರಿದಾಗ, ರಾತ್ರಿ ಮದುವೆಯೇ ಬೇಡ ಎಂದು ಉಂಗುರ ಕಳಚಿಕೊಟ್ಟಿದ್ದಾನೆ.

ಇದೆಲ್ಲ ಘಟನೆಯಿಂದ ಬೇಸತ್ತ ವಧು ಕೂಡ ಈ ಮದುವೆಯೇ ಬೇಡ ಎಂದು ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ. ಹೀಗಾಗಿ ಗುರು ಹಿರಿಯರೆಲ್ಲರೂ ಸೇರಿ ನಿಶ್ಚಯಿಸಿದ ವಿವಾಹ ಕಾರ್ಯವು ಸಿಹಿ ತಿಂಡಿ ವಿಚಾರವಾಗಿ ಮುರಿದು ಬಿದ್ದಿದೆ.

Advertisement
Tags :
Advertisement