For the best experience, open
https://m.newskannada.com
on your mobile browser.
Advertisement

ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ ಕೊಟ್ಟ ಭಗವಂತ್ ಮಾನ್ !

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿಯನ್ನ ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ ಸ್ವಲ್ಪ ಸಮಯದ ನಂತರ, ಆಮ್ ಆದ್ಮಿ ಪಕ್ಷ  ಪಂಜಾಬ್ನ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.
03:14 PM Jan 24, 2024 IST | Ashitha S
ಇಂಡಿಯಾ ಮೈತ್ರಿಕೂಟಕ್ಕೆ ಬಿಗ್ ಶಾಕ್ ಕೊಟ್ಟ ಭಗವಂತ್ ಮಾನ್

ವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನೊಂದಿಗೆ ಯಾವುದೇ ಮೈತ್ರಿಯನ್ನು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ ಸ್ವಲ್ಪ ಸಮಯದ ನಂತರ, ಆಮ್ ಆದ್ಮಿ ಪಕ್ಷ  ಪಂಜಾಬ್ ನ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದೆ.

Advertisement

ಈ ಮೂಲಕ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಅನ್ನೋದು ಸ್ಪಷ್ಟವಾಗಿದೆ.

ಹೌದು. . ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಎಲ್ಲಾ 13 ಲೋಕಸಭಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.

Advertisement

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಲೋಕಸಭಾ ಚುನಾವಣೆಯನ್ನು ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಎದುರಿಸಲಿದೆ ಎಂದು ಮಮತಾ ಬ್ಯಾನರ್ಜಿ ಘೋಷಣೆ ಮಾಡಿದ ಬೆನ್ನಲ್ಲೇ ಎಎಪಿ ಈ ನಿರ್ಧಾರ ಪ್ರಕಟಿಸಿದೆ.

Advertisement
Tags :
Advertisement