For the best experience, open
https://m.newskannada.com
on your mobile browser.
Advertisement

‘ಆರಾಮ್ ಅರವಿಂದ ಸ್ವಾಮಿ’ ಸಿನೆಮಾದ ಟೈಟಲ್ ಟ್ರ‍್ಯಾಕ್ ರಿಲೀಸ್

‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಸುಮಾರು ಸಿನೆಮಾದಲ್ಲಿ ನಾಯಕನಟನಾಗಿ ಅಭಿನಯಿಸಿರುವ  ನಟ ಅನೀಶ್ ತೇಜೇಶ್ವರ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಬರ್ತಡೇ ಸ್ಪೆಷಲ್ ಆಗಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಮೊದಲ ಹಾಡನ್ನು ಅನಾವರಣ ಮಾಡಲಾಗಿದೆ.
08:19 PM Jan 12, 2024 IST | Ashika S
‘ಆರಾಮ್ ಅರವಿಂದ ಸ್ವಾಮಿ’ ಸಿನೆಮಾದ ಟೈಟಲ್ ಟ್ರ‍್ಯಾಕ್ ರಿಲೀಸ್

ಬೆಂಗಳೂರು: ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಸುಮಾರು ಸಿನೆಮಾದಲ್ಲಿ ನಾಯಕನಟನಾಗಿ ಅಭಿನಯಿಸಿರುವ  ನಟ ಅನೀಶ್ ತೇಜೇಶ್ವರ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಬರ್ತಡೇ ಸ್ಪೆಷಲ್ ಆಗಿ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾದ ಮೊದಲ ಹಾಡನ್ನು ಅನಾವರಣ ಮಾಡಲಾಗಿದೆ.

Advertisement

ಅನೀಶ್ ತೇಜೇಶ್ವರ್‌ಗೆ ಜೋಡಿಯಾಗಿ ಮಿಲನ ನಾಗರಾಜ್  ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

‘ಆರಾಮ್ ಅರವಿಂದ ಸ್ವಾಮಿ’ ಟೈಟಲ್ ಟ್ರ‍್ಯಾಕ್‌ಗೆ ನಾಗಾರ್ಜುನ್ ಶರ್ಮಾ ಪದಪುಂಜ ಪೊಣಿಸಿದ್ದು, ನಿಶಾನ್ ರೈ ಕಂಠ ಕುಣಿಸಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ನೀಡಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಫಿ ಮಾಡಿದ್ದಾರೆ. ಅಭಿಷೇಕ್ ಶೆಟ್ಟಿ  ನಿರ್ದೇಶನ ಮಾಡಿದ್ದಾರೆ.

Advertisement

ನಾಯಕನ ಗುಣವನ್ನು ವರ್ಣಿಸುವ ಈ ಟೈಟಲ್ ಟ್ರ‍್ಯಾಕ್ ಅನೀಶ್ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಯಲ್ಲಿ ಈ ಸಿಂಗಿಂಗ್ ಮಸ್ತಿ ಮೂಡಿಬಂದಿದೆ.

ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ‘ಆರಾಮ ಅರವಿಂದ ಸ್ವಾಮಿ’ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.

Advertisement
Tags :
Advertisement