ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಕ್ತರ ದರ್ಶನಕ್ಕೆ ಬಾಗಿಲು ತೆರೆದಿದೆ ಅಬುಧಾಬಿ ಹಿಂದೂ ದೇವಾಲಯ

ಇದೇ ವರ್ಷ ಫೆಬ್ರವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಯುಎಇ ಮೊದಲ ಹಿಂದೂ ದೇವಾಲಯವನ್ನು ಶುಕ್ರವಾರದಂದು ಭಕ್ತರು ಮತ್ತು ಸಾರ್ವಜನಿಕರಿಗೆ ತೆರೆಯಲಾಗಿದ್ದು ಕೆಲವು ಕಟ್ಟುನಿಟ್ಟು ನಿಯಮಗಳನ್ನು ಜಾರಿಗೆ ತರಲಾಗಿದೆ.
03:26 PM Mar 02, 2024 IST | Nisarga K
ಭಕ್ತರ ದರ್ಶನಕ್ಕೆ ಬಾಗಿಲು ತೆರೆದ ಅಬುಧಾಬಿ ಹಿಂದೂ ದೇವಾಲಯ

ಅಬುಧಾಬಿ:  ಇದೇ ವರ್ಷ ಫೆಬ್ರವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಯುಎಇ ಮೊದಲ ಹಿಂದೂ ದೇವಾಲಯವನ್ನು ಶುಕ್ರವಾರದಂದು ಭಕ್ತರು ಮತ್ತು ಸಾರ್ವಜನಿಕರಿಗೆ ತೆರೆಯಲಾಗಿದ್ದು ಕೆಲವು ಕಟ್ಟುನಿಟ್ಟು ನಿಯಮಗಳನ್ನು ಜಾರಿಗೆ ತರಲಾಗಿದೆ.

Advertisement

ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ದುಬೈ-ಅಬುಧಾಬಿ ಶೇಖ್ ಜಾಯೆದ್ ಹೆದ್ದಾರಿಯ ಅಲ್ ರಹ್ಬಾ ಬಳಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ಈ ದೇವಾಲಯವನ್ನು ನಿರ್ಮಿಸಿದೆ. ದೇವಾಲಯದ ಭೂಮಿಯನ್ನು ಯುಎಇ ಸರ್ಕಾರ ದಾನ ಮಾಡಿದೆ.

ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಡ್ರೆಸ್‌ಕೋಡ್‌ ಮಾಡಲಾಗಿದೆ ಹಾಗೂ ದರ್ಶನಕ್ಕೆ ಸಮಯವನ್ನು ನಿಗಧಿಪಡಿಸಲಾಗಿದೆ ಎಂದು ಈ ಕುರಿತು BAPS ಹಿಂದೂ ಮಂದಿರದ ಎಕ್ಸ್‌ ಖಾತೆಯಲ್ಲಿ ವಿವರ ನೀಡಲಾಗಿದೆ. ಬಹಳ ದಿನಗಳ ಕಾಯುವಿಕೆ ನಂತರ ಇದೀಗ ಅಬುಧಾಬಿ ಮಂದಿರ ಈಗ ಸಾರ್ವಜನಿಕರ ದರ್ಶನಕ್ಕೆ ತೆರೆದಿರುತ್ತದೆ ಎಂಬ ಪೋಸ್ಟ್‌ ಜೊತೆಗೆ ಭವ್ಯ ದೇಗುಲದ ಅದ್ಭುತ ವೀಡಿಯೋವನ್ನು ಸಹ ಹಂಚಿಕೊಂಡಿದೆ. ಸೋಮವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ದೇವಾಲಯವು ಬೆಳಗ್ಗೆ 9 ರಿಂದ ರಾತ್ರಿ 8 ರವರೆಗೆ ತೆರೆದಿರುತ್ತದೆ ಎಂದು ಪೋಸ್ಟ್ ನಲ್ಲಿ ಉಲ್ಲೇಖಿಸಲಾಗಿದೆ.

Advertisement

ಅಲ್ಲದೇ ದರ್ಶನಕ್ಕೆ ಬರುವ ಭಕ್ತರಿಗೆ ಕೆಲವು ನಿಯಮಗಳನ್ನು ಅಳವಡಿಸಲಾಗಿದ್ದು ಅದರ ಸಹವಿವರನ್ನು ವೆಬ್‌ಸೈಟ್‌ನಲ್ಲಿ ಹೇಳಿದ್ದಾರೆ.
ಯಾವುದೆಲ್ಲಾ ನಿಯಮಗಳು ಎಂದು ನೋಡುವುದಾದರೆ;
ಡ್ರೆಸ್‌ಕೋಡ್‌  ಸಂಬಂಧಪಟ್ಟಂತೆ,
* ಭಕ್ತರು ಕುತ್ತಿಗೆ, ಮೊಣಕೈ ಮತ್ತು ಮೊಣಕಾಲುಗಳು ಕಾಣುವಂತೆ ಬಟ್ಟೆ ಧರಿಸಬಾರದು.
* ಕ್ಯಾಪ್ಸ್, ಟೀ ಶರ್ಟ್‌ಗಳು ಮತ್ತು ಆಕ್ಷೇಪಾರ್ಹ ವಿನ್ಯಾಸಗಳನ್ನು ಹೊಂದಿರುವ ಇತರ ಉಡುಪುಗಳನ್ನು ಅನುಮತಿಸಲಾಗುವುದಿಲ್ಲ.
* ಅರೆಬರೆ ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳಿಗೆ ಅವಕಾಶ ಇಲ್ಲ.
* ತಬ್ಬಿಬ್ಬುಗೊಳಿಸುವ ಶಬ್ದಗಳು ಹಾಗೂ ಶೈನಿಂಗ್‌ ಬಟ್ಟೆಗಳಿಗೂ ನಿಷೇಧ.

ಈ ಮಾರ್ಗಸೂಚಿ ಅಥವಾ ನಿಯಮಗಳನ್ನು ಪಾಲಿಸದ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಒಟ್ಟಿನಲ್ಲಿ ಪ್ರಶಾಂತ ವಾತಾವರಣವನ್ನು ಕಾಪಾಡಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅವಶ್ಯಕ ಎಂದು ದೇವಸ್ಥಾನದ ಅಧಿಕಾರಿಗಳು ಹೇಳಿದ್ದಾರೆ.

Advertisement
Tags :
ABUDHABIdevoteesHINDULatestNewsNewsKannadaOpenTEMPLE
Advertisement
Next Article