ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಟೋ-ಕ್ಯಾಂಟರ್ ಮಧ್ಯೆ ಭೀಕರ ಅಪಘಾತ: ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕ

ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬಳಿ ನಡೆದಿದೆ. ಆಟೋದಲ್ಲಿ ಚಾಲಕ ಸೇರಿ ಒಟ್ಟು 12 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು.
10:58 AM Nov 23, 2023 IST | Gayathri SG

ಚಿಕ್ಕಬಳ್ಳಾಪುರ: ಆಟೋ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಕಾಲೇಜು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೌರಿಬಿದನೂರು ನಗರದ ನಾಗಪ್ಪ ಬ್ಲಾಕ್ ಬಳಿ ನಡೆದಿದೆ. ಆಟೋದಲ್ಲಿ ಚಾಲಕ ಸೇರಿ ಒಟ್ಟು 12 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ಮೂವರು ವಿದ್ಯಾರ್ಥಿನಿಯರ ಸ್ಥಿತಿ ಚಿಂತಾಜನಕವಾಗಿದೆ. ವಿಧುರಾಶ್ವಥದಿಂದ ಗೌರಿಬಿದನೂರಿಗೆ ಬರುವ ವೇಳೆ ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ಗೌರಿಬಿದನೂರಿನ ಕಾಲೇಜಿಗೆ ತೆರಳುತಿದ್ದರು.

Advertisement

ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಛಿದ್ರಗೊಂಡಿದೆ. ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗೌರಿಬಿದನೂರಿನಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ. ಇನ್ನು ದುರ್ಘಟನಾ ಸ್ಥಳಕ್ಕೆ ಗೌರಿಬಿದನೂರು‌ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Tags :
LatestNewsNewsKannadaಅಪಘಾತಆಟೋಕ್ಯಾಂಟರ್ವಿದ್ಯಾರ್ಥಿನಿ
Advertisement
Next Article