ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಮೃತ್ಯು

ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
09:31 AM Feb 29, 2024 IST | Nisarga K
ಕಾಪು: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಚಾಲಕ ಮೃತ್ಯು

ಉಡುಪಿ:  ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ  ಡಿಕ್ಕಿ  ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ತಾಲೂಕಿನ ಪಾಂಗಾಳದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.

Advertisement

ಮೃತರನ್ನು ಭಾರತ್ ನಗರ ನಿವಾಸಿ ನಾಗೇಶ್ ಕಾಮತ್ (70) ಎಂದು ಗುರುತಿಸಲಾಗಿದೆ.  ಕಾಪುವಿನ ಮೆಸ್ಕಾಂಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಎಇಇ ಅವರನ್ನು ಮನೆಗೆ ಬಿಟ್ಟು ಕಾಪು ಕಡೆಗೆ ಆಗಮಿಸುತ್ತಿದ್ದಾಗ ಪಾಂಗಾಳದಲ್ಲಿ ಈ ದುರ್ಘಟನೆ ಸಂಭವಿಸಿದೆ.  ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ  ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಿಂದಾಗಿ ಕೆಲವು ಹೊತ್ತು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕಾರಿನೊಳಗೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು. ಕಬ್ಬಿಣದ ರಾಡ್ ಬಳಸಿ ಚಾಲಕನನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Advertisement

Advertisement
Tags :
ACCIDENTCARDEADDRIVERindiaKapuLatestNewsNewsKannadaUDUPI
Advertisement
Next Article