ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅನಾರೋಗ್ಯದಿಂದ ಮನನೊಂದು ಲೆಕ್ಕಾಧಿಕಾರಿ​​ ಆತ್ಮಹತ್ಯೆ

ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
10:30 PM Jan 12, 2024 IST | Ashika S

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮ ಪಂಚಾಯಿತಿ ಲೆಕ್ಕಾಧಿಕಾರಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಚಿತ್ರದುರ್ಗ ನಗರದ ಕೆಳಗೋಟೆ ನಿವಾಸಿ ನಾಗರಾಜ್​​(45) ಎಂದು ಗುರುತಿಸಲಾಗಿದೆ.

ಅವರು ಕಳೆದ ವಾರದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಜನವರಿ 3ರಂದು ಚಳ್ಳಕೆರೆ ಠಾಣೆಯಲ್ಲಿ ನಾಪತ್ತೆ ಕೇಸ್​​ ದಾಖಲಾಗಿತ್ತು. ಆದರೆ ಈಗ ನಾಗರಾಜ್ ಶವ ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

Advertisement

ಸುಮಾರು ಏಳೆಂಟು ದಿನದ ಹಿಂದೆಯೇ ನೇಣಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಅನಾರೋಗ್ಯದಿಂದ ಮನನೊಂದು ನಾಗರಾಜ್​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನೇಣುಬಿಗಿದಲೆಕ್ಕಾಧಿಕಾರಿಶವಸ್ಥಿತಿ
Advertisement
Next Article