For the best experience, open
https://m.newskannada.com
on your mobile browser.
Advertisement

ರಶ್ಮಿಕಾ ಮಂದಣ್ಣ ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
07:55 PM Jan 21, 2024 IST | Ashika S
ರಶ್ಮಿಕಾ ಮಂದಣ್ಣ ಡೀಪ್​ ಫೇಕ್​ ವಿಡಿಯೋ ಶೇರ್​ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಕೊನೆಗೂ ಈ ಪ್ರಕರಣವನ್ನು ದೆಹಲಿ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ದೆಹಲಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ, ಇಮಾನಿ ನವೀನ್ (24) ಬಂಧಿತ ಆರೋಪಿ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್​ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಟಿ ರಶ್ಮಿಕಾ ಮಂದಣ್ಣ "ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ. ಕೃತ್ಯ ಎಸಗಿದವರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಹುಡುಗರೇ- ನಿಮ್ಮ ಒಪ್ಪಿಗೆಯಿಲ್ಲದೇ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ ಅದು ತಪ್ಪು. ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ. ಹೀಗೆ ಮಾಡಿದ್ರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಬರೆದುಕೊಂಡಿದ್ದಾರೆ.

Advertisement

ಸದ್ಯ ದೆಹಲಿ ಪೊಲೀಸರು ಆಂಧ್ರಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತ ಆರೋಪಿಯೂ ರಶ್ಮಿಕಾ ಮಂದಣ್ಣ ಫ್ಯಾನ್ ಪೇಜ್ ಅಡ್ಮಿನ್ ಆಗಿದ್ದನಂತೆ. ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ಡೀಪ್ ಫೇಕ್ ವಿಡಿಯೋ ಸೃಷ್ಟಿ ಮಾಡಿದ್ದಾನಂತೆ.

Advertisement
Tags :
Advertisement