ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ !

ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆಯಸಿಡ್‌ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ.
11:25 AM Mar 04, 2024 IST | Ashitha S

ಕಡಬ: ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು(ಮಾ.04) ನಡೆದಿದೆ.

Advertisement

ಘಟನೆಯಲ್ಲಿ ಅಲೀನಾ ಸಿಬಿ, ಅರ್ಚನಾ, ಅಮೃತ ಎಂಬ ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆದಿದ್ದು, ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯವಾಗಿದೆ. ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ರವಾನೆಗೆ ಸಿದ್ದತೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿನಿಯರು ಎಲ್ಲರೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ. ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ಪರೀಕ್ಷಾ ತಯಾರಿ ನಡೆಸುವ ವೇಳೆ ಘಟನೆ ನಡೆದಿದೆ.

ಇನ್ನು  ಆ್ಯಸಿಡ್ ಎರಚಿದ  ಆರೋಪಿಯನ್ನು  ಕೇರಳ ಮೂಲದ ಎಬಿನ್(23) ಎಂದು ಗುರುತಿಸಲಾಗಿದ್ದು,  ಈತ ಎಂಬಿಎ ವ್ಯಾಸಂಗ ಮಾಡುತ್ತಿದ್ದ.  ಅಲೀನಾ ಸಿಬಿ ಎಂಬ ವಿದ್ಯಾರ್ಥಿನಿಯನ್ನ ಟಾರ್ಗೆಟ್ ಮಾಡಿ ಈತ ದಾಳಿ ನಡೆಸಿದ್ದಾನೆ.  ಪರಿಣಾಮ ಆಕೆಯ ಗೆಳತಿಯರಿಗೂ ಗಂಭೀರ ಗಾಯವಾಗಿದೆ.

Advertisement

ಸದ್ಯ ಕಡಬ ಪೊಲೀಸರ ವಶದಲ್ಲಿರುವ ಆರೋಪಿ ಪೊಲೀಸರ ಲಾಠಿಯೇಟಿಗೆ ತಾನು ಕೃತ್ಯ ಎಸಗಿದ್ದಕ್ಕೆ ಕಾರಣವನ್ನು ಬಿಚ್ಚಿಟ್ಟಿದ್ದಾನೆ.

ಆಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ ಮಹತ್ವದ ಮಾಹಿತಿ ನೀಡಿದ್ದು, 'ಇದು ಲವ್ ವಿಚಾರವಾಗಿ ನಡೆದಿರುವ ಘಟನೆ.  ತನ್ನದೇ ಕೋಮಿಗೆ ಸೇರಿದ್ದ ಅಲಿನಾಗೆ ಆರೋಪಿ ಅಬಿನ್ ಪ್ರೇಮ ನಿವೇದನೆ ಮಾಡಿದ್ದ. ಆದರೆ ಶಿಕ್ಷಣದ ಬಗ್ಗೆ ಮಾತ್ರ ಗಮನ ಹರಿಸಿದ್ದ ಅಲಿನಾ ಆತನ ಪ್ರೇಮವನ್ನು ತಿರಸ್ಕರಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಆರೋಪಿಯು ನೀನು ನನಗೆ ಸಿಗದಿದ್ದರೆ ಬೇರೆ ಯಾರಿಗೂ ಸಿಗಬಾರದು ಎಂಬ ಭಾವನೆಯಿಂದ ಆಕೆಯ ಮೇಲೆ ಆಯಸಿಡ್ ದಾಳಿ ಮಾಡಿದ್ದಾನೆ. ಈ ಆಸ್ಯಿಡ್ ಕಡಿಮೆ ತೀವ್ರತೆಯನ್ನು ಹೊಂದಿದೆ. ಈ ಆಸ್ಯಿಡ್ ನಿಂದ ಗುಳ್ಳೆಗಳು ಸೃಷ್ಠಿಯಾಗುತ್ತದೆ. ಒಬ್ಬಾಕೆಯ ಮುಖದ ಮೇಲೆ ಆ್ಯಸಿಡ್ ಎರಚಿದ್ದಾನೆ. ಈ ವೇಳೆ ಇಬ್ಬರ ಕೈಗೆ ಆಸ್ಯಿಡ್ ದ್ರವ್ಯ ತಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಅಲ್ಲದೇ, ಆರೋಪಿ ವಿದ್ಯಾರ್ಥಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು, ಆತನಿಂದ ಆಸ್ಯಿಡ್ ಬಾಟಲ್ ವಶಪಡಿಸಿಕೊಂಡಿದ್ದೇವೆ. ಆಸ್ಯಿಡ್ ಸಿಕ್ಕಿದ ಬಗ್ಗೆ ವಿಚಾರಣೆ ಮಾಡುತ್ತಿದ್ದೇವೆ. ಪ್ರಾಥಮಿಕ ವಿಚಾರಣೆಯಲ್ಲಿ ಲವ್ ಮಾಹಿತಿಯನ್ನು ಹೇಳಿದ್ದಾನೆ. ವಿದ್ಯಾರ್ಥಿನಿಯ ಸ್ಥಿತಿ ಸದ್ಯ ಜೌಟ್ ಆಫ್ ಡೇಂಜರ್ ಇದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೇರೆ ಬೇರೆ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಮಾಹಿತಿಯ ಪ್ರಕಾರ ಮತ್ತು ಆರೋಪಿ ಬಾಯ್ಬಿಟ್ಟ ಪ್ರಕಾರ ಪ್ರೇಮ ವೈಪಲ್ಯವೇ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಲು ಪ್ರಮುಖ ಕಾರಣ ಎಂದು ತಿಳಿದು ಬಂದಿದ್ದು, ಅಲಿನಾಳನ್ನು ಟಾರ್ಗೆಟ್ ಮಾಡಿ‌ ಬಂದಿದ್ದ ಎಂಬಿಎ ವಿದ್ಯಾರ್ಥಿ ಆರೋಪಿ ಅಬಿನ್, ಆಕೆಯ ಮೇಲೆ ಆ್ಯಸಿಡ್ ದಾಳಿ ಮಾಡುವಾಗ ಪಕ್ಕದಲ್ಲಿ ಕುಳಿತಿದ್ದ ಇನ್ನೂ ಇಬ್ಬರ ಮೇಲೆ ಆಯಸಿಡ್ ತಾಗಿದೆ ಎಂದು ತಿಳಿದು ಬಂದಿದೆ.

Advertisement
Tags :
BreakingNewscrimeindiaKARNATAKALatestNewsNewsKannadaPOLICEಕಡಬ
Advertisement
Next Article