ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಘಾತದಿಂದ ನಿಧನ

ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ಮಂಗಳವಾರ (ಡಿಸೆಂಬರ್ 26) ನಿಧನ ಹೊಂದಿದ್ದಾರೆ.
08:30 AM Dec 27, 2023 IST | Ashika S

 ಬೆಂಗಳೂರು: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ಸಾಹಸ ನಿರ್ದೇಶನ ಮಾಡಿದ್ದ ಜಾಲಿ ಬಾಸ್ಟಿನ್ ಹಠಾತ್ ಹೃದಯಘಾತದಿಂದ ಮಂಗಳವಾರ (ಡಿಸೆಂಬರ್ 26) ನಿಧನ ಹೊಂದಿದ್ದಾರೆ.  ಅವರಿಗೆ 57 ವರ್ಷ ವಯಸ್ಸಾಗಿತ್ತು.

Advertisement

ಸಾಹಸ ಕಲಾವಿದನಾಗಿ, ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ ಜಾಲಿ ಅವರು ಈವರೆಗೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ‘ಪ್ರೇಮಲೋಕ’ , ‘ಮಾಸ್ಟರ್​ ಪೀಸ್’ ಸೇರಿ ನೂರಾರು ಸಿನಿಮಾಗಳಿಗೆ ಅವರು ಸ್ಟಂಟ್​ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

‘ನಿನಗಾಗಿ ಕಾದಿರುವೆ’ ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟರು. ಒಂದು ಕಾಲಕ್ಕೆ ಅತಿಹೆಚ್ಚು ಸಂಭಾವನೆ ಪಡೆಯೋ ಸಾಹಸ ನಿರ್ದೇಶಕ ಎಂಬ ಹೆಗ್ಗಳಿಕೆ ಅವರಿಗೆ ಇತ್ತು. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ಸಾಹಸ ನಿರ್ದೇಶಕನಾಗಿ ಜಾಲಿ ಬಾಸ್ಟಿನ್ ಹೆಸರು ಮಾಡಿದ್ದರು.

Advertisement

ಜಾಲಿ ಅವರು ಹುಟ್ಟಿದ್ದು 1966ರಲ್ಲಿ. ಕೇರಳದ ಅಲೆಪ್ಪೆಯಲ್ಲಿ ಅವರು ಜನನ ಆಯಿತು. ಆದರೆ, ಅವರು ಬೆಳೆದಿದ್ದು ಬೆಂಗಳೂರಿನಲ್ಲಿ. ಅವರು ಬೆಂಗಳೂರಿನಲ್ಲೇ ಶಿಕ್ಷಣ ಪಡೆದರು. ಬೈಕ್ ಮೆಕಾನಿಕ್ ಆಗಿ ಜಾಲಿ ಬಾಸ್ಟಿನ್ ವೃತ್ತಿ ಆರಂಭಿಸಿದರು. ಅವರನ್ನು ಗುರುತಿಸಿದ ಕೆಲವರು ಸ್ಟಂಟ್​ಮನ್ ಆಗಿ ಚಿತ್ರರಂಗಕ್ಕೆ ಪರಿಚಯಿಸಿದರು.

Advertisement
Tags :
LatetsNewsNewsKannadaಜಾಲಿ ಬಾಸ್ಟಿನ್ನಿಧನಭಾಷೆಸಾಹಸ ನಿರ್ದೇಶನಹೃದಯಘಾತ
Advertisement
Next Article