For the best experience, open
https://m.newskannada.com
on your mobile browser.
Advertisement

ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್  ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. 
07:26 PM Mar 07, 2024 IST | Ashika S
ತಮಿಳು ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳಿನ ಜನಪ್ರಿಯ ನಟ ಅಜಿತ್ ಕುಮಾರ್  ಅನಾರೋಗ್ಯದಿಂದ ಬಳಲುತ್ತಿದ್ದು, ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಇಂದು (ಮಾರ್ಚ್ 07) ರ ಬೆಳಿಗ್ಗೆ ಅಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಎದುರಾದ ಆರೋಗ್ಯ ಸಮಸ್ಯೆ ಏನೆಂಬುದರ ಬಗ್ಗೆ ಇನ್ನಷ್ಟೆ ಖಚಿತ ಮಾಹಿತಿ ತಿಳಿಯಬೇಕಿದೆ.

ಅಜಿತ್​ ಆಸ್ಪತ್ರೆಗೆ ದಾಖಲಾಗಿರುವ ವಿಷಯವನ್ನು ಅವರ ಆಪ್ತ ಮೂಲಗಳು ಮಾಧ್ಯಮಗಳಿಗೆ ಖಚಿತಪಡಿಸಿವೆ. ಆದರೆ ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

Advertisement

ಕೆಲವು ಅಭಿಮಾನಿ ಪೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯಂತೆ ಅಜಿತ್ ಅವರು ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ.

ಅಜಿತ್ ಆಸ್ಪತ್ರೆಗೆ ದಾಖಲಾಗಿರುವುದು ನಿಜ ಆದರೆ ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಹರಿಬಿಡುವುದು ಬೇಡ, ಆಸ್ಪತ್ರೆಯಿಂದಲೇ ಖಚಿತ ಮಾಹಿತಿ ಹೊರಬೀಳಲಿದೆ ಎಂದು ಅಜಿತ್​ರ ಆಪ್ತರು ಮಾಧ್ಯಮಗಳಿಗೆ ತಿಳಿಸಿರುವುದಾಗಿ ತಮಿಳಿನ ಕೆಲ ಮಾಧ್ಯಮಗಳು ವರದಿ ಮಾಡಿವೆ.

Advertisement
Tags :
Advertisement