For the best experience, open
https://m.newskannada.com
on your mobile browser.
Advertisement

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಅಲ್ಕಾಪುರ ಕಾಲೋನಿಯಲ್ಲಿ ನಡೆದಿದೆ.
06:41 AM May 18, 2024 IST | Ashika S
ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಹೈದರಾಬಾದ್: ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಅಲ್ಕಾಪುರ ಕಾಲೋನಿಯಲ್ಲಿ ನಡೆದಿದೆ.

Advertisement

ಕಿರುತೆರೆ ನಟಿ ಪವಿತ್ರಾ ಜಯರಾಂ ಜತೆ ಚಂದು ಆರು ವರ್ಷಗಳ ಕಾಲ ವಿವಾಹೇತರ ಸಂಬಂಧ ಹೊಂದಿದ್ದರಂತೆ. ನಟಿ ಸಾವನ್ನು ಸಹಿಸಲಾಗದೆ ನಟ ಚಂದು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದರು. ಜೊತೆಗೆ ಹಲವು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು.

Advertisement

ಮೃತ ನಟ ಚಂದು ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. 2015ರಲ್ಲಿ ಚಂದು ಅವರು ಶಿಲ್ಪಾ ಎಂಬುವವರ ವಿವಾಹವಾದರು.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
Advertisement