For the best experience, open
https://m.newskannada.com
on your mobile browser.
Advertisement

ನಟ ಜಗ್ಗೇಶ್ ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಮನೆಗೆ ಮುತ್ತಿಗೆ: ನಾರಾಯಣ ಸ್ವಾಮಿ

ಸ್ಯಾಂಡಲ್ವುಡ್ ನಟ ಜಗ್ಗೇಶ್ ತಮ್ಮ ನಟನೆಯ ‘ರಂಗನಾಯಕ’ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ ಬಂಧನಕ್ಕೆ ಒಳಗಾದ ವಿಷಯ ಮಾತನಾಡುತ್ತಾ, ‘ಯಾವನೋ ಕಿತ್ತೋದ್ ನನ್ ಮಗ ರಿಯಲ್ ಹುಲಿ ಉಗುರು ಹಾಕ್ಕೋಂಡ್ ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ’ ಎಂದಿದ್ದರು.
08:29 PM Feb 18, 2024 IST | Gayathri SG
ನಟ ಜಗ್ಗೇಶ್ ಕ್ಷಮೆ ಕೇಳದಿದ್ದರೆ ಪ್ರತಿಭಟನೆ  ಮನೆಗೆ ಮುತ್ತಿಗೆ  ನಾರಾಯಣ ಸ್ವಾಮಿ

ಸ್ಯಾಂಡಲ್ವುಡ್ ನಟ ಜಗ್ಗೇಶ್ ತಮ್ಮ ನಟನೆಯ ‘ರಂಗನಾಯಕ’ ಸಿನಿಮಾದ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಹುಲಿ ಉಗುರು ಪ್ರಕರಣದ ಬಗ್ಗೆ ಮಾತನಾಡುತ್ತಾ ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ ಬಂಧನಕ್ಕೆ ಒಳಗಾದ ವಿಷಯ ಮಾತನಾಡುತ್ತಾ, ‘ಯಾವನೋ ಕಿತ್ತೋದ್ ನನ್ ಮಗ ರಿಯಲ್ ಹುಲಿ ಉಗುರು ಹಾಕ್ಕೋಂಡ್ ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ’ ಎಂದಿದ್ದರು.

Advertisement

ಈ ಬಗ್ಗೆ ಮಾತನಾಡಿದ್ದ ವರ್ತೂರು ಸಂತೋಷ್, ‘ಅವರು ದೊಡ್ಡವರು, ಎಲ್ಲದಕ್ಕೂ ಉತ್ತರ ಕೊಡಬೇಕಿಲ್ಲ, ನಾವು ಸುಮ್ಮನಿದ್ದರೆ ಅದೇ ಉತ್ತರ, ‘ಕಾಲಾಯ ತಸ್ಮೈ ನಮಃ’ ಎಂದಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿರುವ ಹೆಬ್ಬಗೋಡಿ ಮಾಜಿ ನಗರಸಭೆ ಸದಸ್ಯ, ಹಾಗೂ ವಹ್ನಿಕುಲ ಕ್ಷತ್ರಿಯ ಸಮಯುದಾಯದ ಮುಖಂಡ ನಾರಾಯಣ ಸ್ವಾಮಿ, ‘ಬಿಗ್‌ಬಾಸ್ ಖ್ಯಾತಿಯ ಹಳ್ಳಿಕಾರ್ ಒಡೆಯ ವರ್ತೂರ್ ಸಂತೋಷ್ ಬಗ್ಗೆ ರಾಜ್ಯಸಭಾ ಸದಸ್ಯ, ಚಲನಚಿತ್ರ ನಟ ಜಗ್ಗೇಶ್ ಲಘುವಾಗಿ ಮಾತನಾಡಿದ್ದಾರೆ. ಸಂತೋಷ್ ಒಳ್ಳೆಯ ಮನುಷ್ಯ. ಸಣ್ಣ ಹುಡುಗನನ್ನು ಕೂಡ ಅಣ್ಣ ಎಂದು ಕರೆಯುವ ಒಳ್ಳೆ ಹೃದಯವಂತ, ಸ್ನೇಹಜೀವಿ. ಅಂತಹವರ ಬಗ್ಗೆ ಕೆಟ್ಟ ಪದಗಳನ್ನು ಬಳಸಲಾಗಿದೆ. ಇದರಲ್ಲೇ ನೀನು ಎಲ್ಲರಿಗೂ ಯಾವ ರೀತಿ ಮರ್ಯಾದೆ ಕೊಡುತ್ತೀಯ ಎನ್ನುವುದು ಗೊತ್ತಾಗುತ್ತಿದೆ. ಕೂಡಲೇ ಮಾಧ್ಯಮದ ಮುಂದೆ ಬಂದು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಿ ಧರಣಿ ಕೂರುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

ವರ್ತಕರು ಸಂತೋಷ್, ಕ್ಷತ್ರಿಯ ವಂಶದಲ್ಲಿ ಹುಟ್ಟಿದ್ದಾನೆ. ಅವನು ಬೆಳವಣಿಗೆ ಆಗುತ್ತಿದ್ದಾನೆ ಎಂದು ಹೊಟ್ಟೆ ಕಿಚ್ಚಿನಿಂದ ಈ ರೀತಿಯ ಪದಗಳನ್ನು ಬಳಸುತ್ತಿದ್ದೀಯಾ? ಕ್ಷಮೆ ಕೇಳದಿದ್ದರೆ ವರ್ತೂರು ಸಂತೋಷ್ ಅಭಿಮಾನಿಗಳು ನಿನಗೆ ತಕ್ಕ ಶಾಸ್ತಿ ಮಾಡಬೇಕಾಗುತ್ತದೆ ಎಂದು ಹೇಳಿರುವ ನಾರಾಯಣಸ್ವಾಮಿ, ಆ ಪ್ರಕರಣ ನಡೆದಾಗ ‘ನೀನು ಯಾಕೆ ಕೋರ್ಟ್‌ ಮೊರೆ ಹೋದೆ ಹೇಳು’ ಎಂದಿದ್ದಾರೆ.

Advertisement
Tags :
Advertisement