ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸ್ಯಾಂಡಲ್‌ ವುಡ್ ನಟ ಕೆ.ಶಿವರಾಮ್ ವಿಧಿವಶ

ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.
07:23 PM Feb 29, 2024 IST | Ashitha S

ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಹೃದಯಾಘಾತದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ದೃಢಪಡಿಸಿದ್ದಾರೆ.

Advertisement

ಕೆ. ಶಿವರಾಮು ಅವರು 6 ಏಪ್ರಿಲ್ 1953 ರಂದು ರಾಮನಗರ ಜಿಲ್ಲೆಯ ಉರಗಲ್ಲಿಯಲ್ಲಿ ಜನಿಸಿದರು. ತಂದೆ ಎಸ್.ಕೆಂಪಯ್ಯ ಮತ್ತು ತಾಯಿ ಚಿಕ್ಕಬೋರಮ್ಮ. ತಮ್ಮ ಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಬೆಂಗಳೂರಿಗೆ ತೆರಳಿ ಮಲ್ಲೇಶ್ವರಂ ಸರ್ಕಾರಿ ಶಾಲೆಯಲ್ಲಿ ಪ್ರೌಢಶಾಲೆ ಓದಿದರು. ಕನ್ನಡ ಭಾಷೆಯಲ್ಲಿ IAS ಪರೀಕ್ಷೆಯಲ್ಲಿ ತೇರ್ಗಡೆಯಾದ ಮೊದಲಿಗ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಬಳಿಕ 1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. 'ವಸಂತ ಕಾವ್ಯ', 'ಸಾಂಗ್ಲಿಯಾನಾ ಪಾರ್ಟ್ 3', 'ಪ್ರತಿಭಟನೆ', 'ಯಾರಿಗೆ ಬೇಡ ದುಡ್ಡು', 'ಗೇಮ್ ಫಾರ್ ಲವ್', 'ಟೈಗರ್' ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

Advertisement

Advertisement
Tags :
Actor K SivaramindiaKARNATAKALatestNewsNewsKannadaRIPಬೆಂಗಳೂರು
Advertisement
Next Article