For the best experience, open
https://m.newskannada.com
on your mobile browser.
Advertisement

'ಕಂಗುವ' ಚಿತ್ರೀಕರಣದ​ ವೇಳೆ ಅವಘಡ: ಆರೋಗ್ಯದ ಬಗ್ಗೆ ಅಪ್​ಡೇಟ್ ಕೊಟ್ಟ ನಟ ಸೂರ್ಯ

ಶಿವ ನಿರ್ದೇಶನದ ಕಂಗುವಾ ಚಿತ್ರದ ಚಿತ್ರೀಕರಣದ ವೇಳೆ ಸೂರ್ಯ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಶೂಟಿಂಗ್​ನ ಅರ್ಧಕ್ಕೆ ನಿಲ್ಲಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.
11:05 AM Nov 24, 2023 IST | Gayathri SG
 ಕಂಗುವ  ಚಿತ್ರೀಕರಣದ​ ವೇಳೆ ಅವಘಡ  ಆರೋಗ್ಯದ ಬಗ್ಗೆ ಅಪ್​ಡೇಟ್ ಕೊಟ್ಟ ನಟ ಸೂರ್ಯ

ಶಿವ ನಿರ್ದೇಶನದ ಕಂಗುವಾ ಚಿತ್ರದ ಚಿತ್ರೀಕರಣದ ವೇಳೆ ಸೂರ್ಯ ಅವರ ಭುಜದ ಮೇಲೆ ಕ್ಯಾಮೆರಾ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದ ಶೂಟಿಂಗ್​ನ ಅರ್ಧಕ್ಕೆ ನಿಲ್ಲಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.

Advertisement

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಿರ್ಮಾಪಕ ಜ್ಞಾನವೇಲ್ ರಾಜಾ, "ಇದು ಸಣ್ಣ ಅಪಘಾತ ಮತ್ತು ಅದೃಷ್ಟವಶಾತ್ ಸೂರ್ಯ ಸರ್ ಸುರಕ್ಷಿತವಾಗಿದ್ದಾರೆ ಮತ್ತು ಚೆನ್ನಾಗಿದ್ದಾರೆ" ಎಂದು ಹೇಳಿದ್ದಾರೆ, ನಟನಿಗೆ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಲಾಗಿದೆ. "ನಾವು ಸೂರ್ಯ ಅವರನ್ನು ಆಸ್ಪತ್ರೆಗೆ ಕರೆದೊಯ್ದೆವು ಮತ್ತು ಹಲವಾರು ಪರೀಕ್ಷೆಗಳನ್ನು ನಡೆಸಲಾಯಿತು, ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು. ಅವರು ಚೆನ್ನಾಗಿದ್ದಾರೆ" ಎಂದು ಹೇಳಿದ್ದಾರೆ.

ಆತ್ಮೀಯ ಸ್ನೇಹಿತರೇ, ಹಿತೈಷಿಗಳೇ ಹಾಗೂ ನನ್ನ ಪ್ರೀತಿಯ ಅಭಿಮಾನಿಗಳೇ. ಬೇಗ ಗುಣಮುಖರಾಗಿ ಎಂಬ ನಿಮ್ಮ ಸಂದೇಶಗಳಿಗೆ ಧನ್ಯವಾದ. ಈಗ ಸ್ವಲ್ಪ ಚೇತರಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಸದಾ ಕೃತಜ್ಞ' ಎಂದು ಸೂರ್ಯ ಅವರು ಬರೆದುಕೊಂಡಿದ್ದಾರೆ.

Advertisement

Advertisement
Tags :
Advertisement