ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ನಟ,ನಟಿ ಹಾಗೂ ಗಣ್ಯರಿಂದ ಸಂತಾಪ ಸೂಚನೆ

ನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್‌ ಅವರ ನಿಧನಕ್ಕೆ ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
03:24 PM Apr 16, 2024 IST | Nisarga K
ಹಿರಿಯ ನಟ ದ್ವಾರಕೀಶ್‌ ನಿಧನಕ್ಕೆ ನಟ,ನಟಿ ಹಾಗೂ ಗಣ್ಯರಿಂದ ಸಂತಾಪ ಸೂಚನೆ

ಬೆಂಗಳೂರು:  ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿದ್ದ ದ್ವಾರಕೀಶ್‌ ಅವರ ನಿಧನಕ್ಕೆ ನಟ ನಟಿಯರು ಹಾಗೂ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಟ್ವೀಟ್ ಮಾಡಿ.. ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ ಎಂದು ಸಾಮಾಜಿಕಾ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ
ನಟ ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗಕ್ಕೆ ಸೇವೇಗೈದ ಕನ್ನಡಿಗರ ಪ್ರೀತಿಯ ʻಪ್ರಚಂಡ ಕುಳ್ಳʼ ದ್ವಾರಕೀಶ್‌ ಅವರ ನಿಧನನದ ಸುದ್ದೀ ತಿಳಿದು ದುಃಖವಾಯಿತು. ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಶಿವರಾಜ್‌ ಕುಮಾರ್‌
ಚಿಕ್ಕವಯಸ್ಸಿನಿಂದಲೂ ಅವರೊಂದಿಗೆ ಒಡನಾಡಿದೇನೆ. ಅಪ್ಪಾಜಿ ಜೊತೆಗೆ ಅವರಿಗೆ ಒಡನಾಟ ಹೆಚ್ಚಿತ್ತು. ದ್ವಾರಕೀಶ್‌ ಅವರ ಪ್ರೊಡಕ್ಷನ್ಸ್‌ನಲ್ಲಿ ನಾನು ಆಯುಷ್ಮಾನ್‌ಭವ ಸಿನಿಮಾ ಮಾಡಿದ್ದೇನೆ.ಕನ್ನಡ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ ಎಂದರು. ಶಿವರಾಜಕುಮಾರ್‌

ನಟ ಸುದೀಪ್‌
ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದ್ದೇವೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್‌ ಕೊಡುಗೆಗಳನ್ನು ಮರೆಯಲಾಗದು, ಮರೆಯಕೂಡದು.

ಹಿರಿಯ ನಟ ದೊಡ್ಡಣ್ಣ
ಅವರೊಬ್ಬ ಪ್ರಚಂಡ ಸಾಹಸಿ. ಚಿತ್ರರಂಗದ ಎಲ್ಲ ವಿಭಾಗಗಳ ನೇತೃತ್ವ ವಹಿಸಿದವರು. ಜೀವನದಲ್ಲಿ ಹಲವು ಏರಿಳಿತಗಳನ್ನು ಕಂಡರು.ʻಮುದ್ದಿನ ಮಾವ ಸಿನಿಮಾ ಜೀವನದಲ್ಲಿ ಮಾರೆಯಲು ಸಾಧ್ಯವಿಲ್ಲ. ದೊಡ್ಡಣ್ಣ

ನಟ ದರ್ಶನ್‌ ಕೂಡ ತಮ್ಮ ಎಕ್ಸ್‌ ಖಾತೆಯಲ್ಲಿ ದ್ವಾರಕೀಶ್‌ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ 'ಪ್ರಚಂಡ ಕುಳ್ಳ'ನಾಗಿ ೫ ದಶಕಗಳು ಸೇವೆಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ರವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ತಮ್ಮ ಭಾವನೆ ವ್ಯಕ್ತಪಡಿಸಿದ್ದಾರೆ.

Advertisement
Tags :
ACTORScinemadeathdignitariesDwarakishLatestNewsNewsKarnatakaPolitician
Advertisement
Next Article