ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಖ್ಯಾತ ನಟಿ ಹೇಮಾ ಚೌಧರಿ ಆಸ್ಪತ್ರೆಗೆ ದಾಖಲು

ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ ಬ್ರೈನ್ ಹೆಮರೇಜ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ತೀವ್ರ ನಿಗಾ ಘಟಕದಲ್ಲಿ ನಟಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೇ ವಿದೇಶದಲ್ಲಿರುವ ಮಗನ ಆಗಮನಕ್ಕೆ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
09:38 AM Dec 20, 2023 IST | Ashitha S

ಬೆಂಗಳೂರು: ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳಿಂದ ಬ್ರೈನ್ ಹೆಮರೇಜ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ತೀವ್ರ ನಿಗಾ ಘಟಕದಲ್ಲಿ ನಟಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೇ ವಿದೇಶದಲ್ಲಿರುವ ಮಗನ ಆಗಮನಕ್ಕೆ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್‌, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು.

ಜಯಪ್ರಧಾ, ಜಯಸುಧಾ, ಶ್ರೀದೇವಿ, ಜಯಮಾಲ, ಆರತಿ, ಮಂಜುಳಾ, ಪದ್ಮಪ್ರಿಯ, ಲಕ್ಷ್ಮೀ ಮೊದಲಾದವರ ಜತೆ ತೆರೆಹಂಚಿಕೊಂಡಿದ್ದಾರೆ.

Advertisement

ಸುವರ್ಣ ವಾಹಿನಿಯ ʻಅಮೃತವರ್ಷಿಣಿʼ ಧಾರಾವಾಹಿಯ ಮೂಲಕ ಕಿರುತೆರೆಯಲ್ಲಿಯೂ ಜನಪ್ರಿಯರಾಗಿದ್ದಾರೆ. ಅತ್ತೆ ಶಕುಂತಲಾ ದೇವಿಯಾಗಿ ಪಾತ್ರ ನಿಭಾಯಿಸಿದ್ದರು. ಹೇಮಾ ಚೌಧರಿ ಚಲನಚಿತ್ರಕ್ಕೆ ಸಂಬಂಧಿಸಿದ ಅನೇಕ ಸಂಸ್ಥೆಗಳಲ್ಲಿ ಸದಸ್ಯೆಯಾಗಿ ಸೇವೆ ಸಲ್ಲಿಸಿದ್ದಾರೆ.

Advertisement
Tags :
brain hemorrhageBreakingNewsHema ChaudharyindiaLatestNewsNewsKannadaನವದೆಹಲಿ
Advertisement
Next Article