For the best experience, open
https://m.newskannada.com
on your mobile browser.
Advertisement

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.
12:54 PM May 12, 2024 IST | Nisarga K
ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ
ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಬೆಂಗಳೂರು: ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

Advertisement

ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಟಿ ಪವಿತ್ರ ಜಯರಾಂ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದೆ. ದುರಂತದಲ್ಲಿ ಪವಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಹಬೂಬ್‌ ನಗರದಲ್ಲಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ನಟಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.

Advertisement

ನಾಳೆ ಪವಿತ್ರಾ ಜಯರಾಂ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿಗೆ ರವಾನೆ ಮಾಡಲಾಗುತ್ತಿದೆ. ಪವಿತ್ರ ಜಯರಾಂ ಅವರು ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದ ರೋಬೋ ಫ್ಯಾಮಿಲಿಯಲ್ಲಿ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು.

Advertisement
Tags :
Advertisement