ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಏ. 8ರ ಬಳಿಕ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಕೃಪೆ ತೋರಲಿದ್ದಾನೆ ವರುಣ

ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
08:24 AM Apr 05, 2024 IST | Ashika S

ಬೆಂಗಳೂರು: ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ , ಹಾಗೂ ಏಪ್ರಿಲ್​ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏಪ್ರಿಲ್​ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Advertisement

ಸಧ್ಯದ ಪರಿಸ್ಥಿತಿಯಲ್ಲಿ ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ.

Advertisement
Tags :
BENGALURELatestNewsNewsKarnatakaRAIN
Advertisement
Next Article