For the best experience, open
https://m.newskannada.com
on your mobile browser.
Advertisement

ಬೆಂಗಳೂರಿನಲ್ಲಿ ಬಿಯರ್ ಕೊರತೆ; ಆಫರ್​​ಗಳಿಗೆ ಬ್ರೇಕ್

ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.
09:47 AM May 06, 2024 IST | Ashitha S
ಬೆಂಗಳೂರಿನಲ್ಲಿ ಬಿಯರ್ ಕೊರತೆ  ಆಫರ್​​ಗಳಿಗೆ ಬ್ರೇಕ್

ಬೆಂಗಳೂರು: ನೀರಿನ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಬೆಂಗಳೂರು ನಗರದಲ್ಲಿ ಶೀಘ್ರದ್ಲಲೇ ಬಿಯರ್​ ಬಿಕ್ಕಟ್ಟು ಕೂಡ ಸೃಷ್ಟಿಯಾಗಬಹುದು ಎಂದು ಮಾರುಕಟ್ಟೆ ಮೂಲಗಳು ಅಂದಾಜಿಸಿದೆ.

Advertisement

ಹೆಚ್ಚುತ್ತಿರುವ ಬೇಡಿಕೆ, ಕುಸಿದ ಪೂರೈಕೆಯೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ನಗರದ ಪಬ್‌ಗಳು ಮತ್ತು ಬ್ರೂವರೀಸ್​ಗಳಲ್ಲಿ ಬೇಡಿಕೆ ಗಣನೀಯವಾಗಿ ಹೆಚ್ಚಳವಾಗಿದೆ. ಆದರೆ, ಅದಕ್ಕೆ ತಕ್ಕಷ್ಟು ಪೂರೈಕೆಯಾಗುತ್ತಿಲ್ಲ. ಚಿಲ್ಲರೆ ಮಾರಾಟದ ಅಂಗಡಿಗಳಲ್ಲಿ ದಾಸ್ತಾನು ಮರುಸ್ಥಾಪಿಸುವಲ್ಲಿ ಕೂಡ ವಿಳಂಬವಾಗುತ್ತಿದೆ.

ಇನ್ನು ಈ ವರ್ಷ ಬಳಕೆ, ಬೇಡಿಕೆ ನಿರೀಕ್ಷೆಯನ್ನು ಮೀರಿದೆ. ಬೇಡಿಕೆಗೆ ತಕ್ಕಷ್ಟು ಪೂರೈಕೆ ಮಾಡಲು ಉದ್ಯಮ ಸಿದ್ಧವಾಗಿಲ್ಲ. ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ, ನಾವು ಹಣ್ಣಿನ ಫ್ಲೇವರ್​ಗಳ ಬಿಯರ್ ಅನ್ನು ಪರಿಚಯಿಸುತ್ತೇವೆ.

Advertisement

ಮಾವಿನಹಣ್ಣು ಮತ್ತು ಅನಾನಸ್‌ಗಳಂತಹ ಹಣ್ಣುಗಳ ಲಭ್ಯತೆಯ ಮೇಲೆ ಮಾರಾಟ ಹೆಚ್ಚು ಅವಲಂಬಿತವಾಗಿದೆ. ಈ ವರ್ಷ, ಮಾವಿನಹಣ್ಣಿನ ಸಮಸ್ಯೆಯಿಂದಾಗಿ ಹಣ್ಣಿನ ಬಿಯರ್‌ನ ಮಾರಾಟವು ಕಡಿಮೆಯಾಗಿದೆ. ಪರಿಣಾಮವಾಗಿ ಜನರು ಸಾಮಾನ್ಯ ಬಿಯರ್ ಅನ್ನು ಆಯ್ಕೆ ಮಾಡುತ್ತಿದ್ದಾರೆ ಎಂದು ಮದ್ಯದ ಅಂಗಡಿಯ ಪ್ರತಿನಿಧಿಯೊಬ್ಬರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಅಲ್ಲದೆ ಪೂರೈಕೆ ಸಮಸ್ಯೆಯ ಕಾರಣ ಅನೇಕ ಪಬ್‌ಗಳು ಮತ್ತು ಬ್ರೂವರೀಸ್‌ಗಳು ವಾರಾಂತ್ಯದ ಕೊಡುಗೆಗಳನ್ನು ನಿಲ್ಲಿಸಲು ಮುಂದಾಗಿವೆ. ಶೀಘ್ರದಲ್ಲೇ ಇದು ಜಾರಿಯಾಗಬಹುದು.

2 ಖರೀದಿಸಿದರೆ ಒಂದು ಉಚಿತ ಅಥವಾ ಒಂದು ಖರೀದಿಸಿದರೆ ಮತ್ತೊಂದು ಉಚಿತ ಇತ್ಯಾದಿ ಆಫರ್​​ಗಳನ್ನು ನಿಲ್ಲಿಸಲು ಪಬ್​ಗಳು ಮುಂದಾಗಿವೆ ಎಂದು ‘ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಕೇವಲ ಬೇಸಿಗೆಯ ಕಾರಣದಿಂದಾಗಿ ಬೇಡಿಕೆಯ ಹೆಚ್ಚಳವಾಗಿರುವುದಲ್ಲ. ದೀರ್ಘ ವಾರಾಂತ್ಯಗಳು, ಸಾಲು ರಜೆಗಳೂ ಸಹ ಕಾರಣವಾಗಿವೆ ಎಂದು ವರದಿ ಉಲ್ಲೇಖಿಸಿದೆ.

Advertisement
Tags :
Advertisement