ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಗೌರವಾರ್ಪಣೆ

ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.
02:17 PM Nov 23, 2023 IST | Ashika S

ಮಂಗಳೂರು: ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.

Advertisement

ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು.

ಈ ವೇಳೆ ಅವರನ್ನು ಗುರುತಿಸಿದ ಏ‌ರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ "ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು ಎಂದರು.

Advertisement

ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.

Advertisement
Tags :
LatetsNewsNewsKannadaಅಕ್ಷರ ಸಂತಎಕ್ಸ್ ಪ್ರೆಸ್ಏರ್ ಇಂಡಿಯವಿಮಾನಹರೇಕಳ ಹಾಜಬ್ಬ
Advertisement
Next Article