ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

'ಸಂಘಿ' ಶಬ್ದ ಕೆಟ್ಟದ್ದು ಎಂದು ಐಶ್ವರ್ಯ ಹೇಳಿಲ್ಲ: ಮಗಳ ಪರ ರಜನಿಕಾಂತ್ ಬ್ಯಾಟಿಂಗ್

'ನನ್ನ ಮಗಳು ಸಂಘಿ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ' ಎಂದು ಸೂಪರ್​ ಸ್ಟಾರ್ ರಜನಿಕಾಂತ್ ಸ್ಪಷ್ಟನೆ ನೀಡಿದ್ದಾರೆ. ರಜನಿಕಾಂತ್ ಅವರು ತಮ್ಮ ಮುಂಬರುವ ಚಿತ್ರ ʻಲಾಲ್ ಸಲಾಮ್‌ʼ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಗಳು ಐಶ್ವರ್ಯಾ ರಜನಿಕಾಂತ್ ಅವರ ಇತ್ತೀಚಿನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.‌
05:08 PM Jan 29, 2024 IST | Ashitha S

ಚೆನ್ನೈ: "ನನ್ನ ಮಗಳು ಸಂಘಿ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ" ಎಂದು ಸೂಪರ್​ ಸ್ಟಾರ್ ರಜನಿಕಾಂತ್ ಸ್ಪಷ್ಟನೆ ನೀಡಿದ್ದಾರೆ. ರಜನಿಕಾಂತ್ ಅವರು ತಮ್ಮ ಮುಂಬರುವ ಚಿತ್ರ ʻಲಾಲ್ ಸಲಾಮ್‌ʼ ಸಿನಿಮಾ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಗಳು ಐಶ್ವರ್ಯಾ ರಜನಿಕಾಂತ್ ಅವರ ಇತ್ತೀಚಿನ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.‌

Advertisement

ಇಂದು, ಚೆನ್ನೈ ವಿಮಾನ ನಿಲ್ದಾಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ಅವರು, ಆಡಿಯೋ ಲಾಂಚ್‌ ವೇಳೆ ಮಾತನಾಡಿದ ಐಶ್ವರ್ಯಾ ಅವರ ಹೇಳಿಕೆಯನ್ನು ರಜಿನಿಕಾಂತ್‌ ಸಮರ್ಥಿಸಿಕೊಂಡಿದ್ದಾರೆ. 'ನನ್ನ ಮಗಳು ʻಸಂಘಿʼ ಎನ್ನುವುದು ಕೆಟ್ಟ ಶಬ್ದ ಎಂದು ಎಂದಿಗೂ ಹೇಳಿಲ್ಲ. ನನ್ನ ತಂದೆಯನ್ನು ಏಕೆ ಬ್ರ್ಯಾಂಡ್ ಮಾಡುತ್ತೀರಿ ಎಂದಷ್ಟೇ ಕೇಳಿದ್ದಾರೆ ಎಂದಿದ್ದಾರೆ.

ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಐಶ್ವರ್ಯ, ನಾನು ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಿಂದ ದೂರ ಇರುತ್ತೇನೆ. ಆದರೆ ನನ್ನ ತಂಡ ಹೊರಗಡೆ ಏನಾಗುತ್ತಿದೆ ಎಂದು ಅಪ್‌ಡೇಟ್‌ ಮಾಡುತ್ತಲೇ ಇರುತ್ತಾರೆ. ಕೆಲವು ಪೋಸ್ಟ್‌ಗಳನ್ನು ತೋರಿಸುತ್ತಲೇ ಇರುತ್ತಾರೆ. ಅವುಗಳನ್ನು ನೋಡಿ ನನಗೆ ಕೋಪ ಬರುತ್ತಿತ್ತು. ನಾವೂ ಮನುಷ್ಯರು. ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ನನ್ನ ತಂದೆ ʻಸಂಘಿʼ ಎಂದು ಕರೆದಿದ್ದಾರೆ.

Advertisement

ಇನ್ನು ಅದರ ಅರ್ಥವೇನೆಂದು ನನಗೆ ತಿಳಿದಿರಲಿಲ್ಲ, ನಂತರ ನಾನು ʻಸಂಘಿʼ ಪದದ ಅರ್ಥ ತಿಳಿದಾಗ, ನಿರ್ದಿಷ್ಟ ರಾಜಕೀಯ ಪಕ್ಷವನ್ನು ಬೆಂಬಲಿಸುವ ಜನರನ್ನು ಸಂಘಿ ಎಂದು ಕರೆಯುತ್ತಾರೆ ಎಂದು ಹೇಳಿದರು. ಅಷ್ಟೇ ಅಲ್ಲದೇ ʻಸಂಘಿʼ ಆಗಿದ್ದರೆ ಲಾಲ್ ಸಲಾಂ ಅಂಥ ಸಿನಿಮಾ ಮಾಡುತ್ತಿರಲಿಲ್ಲ' ಎಂದಿದ್ದರು. ಮಗಳ ಹೇಳಿಕೆ ಕೇಳಿ ರಜನಿಕಾಂತ್ ಅವರು ಕಣ್ಣೀರು ಹಾಕಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

Advertisement
Tags :
indiaLatestNewsNewsKannadaಐಶ್ವರ್ಯರಜನಿಕಾಂತ್‌
Advertisement
Next Article